ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಕುಂದುಕೊರತೆ ಆಲಿಕೆ

Lingaraj Badiger
Updated On : 25 Jun 2013, 10:48 am

ಬಳ್ಳಾರಿ: ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಜೂನ್ 26ರಿಂದ 29ರವರೆಗೆ ಜಿಲ್ಲೆಯ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಕುಂದುಕೊರತೆಗಳನ್ನು ಸ್ವೀಕರಿಸಲಿದ್ದಾರೆ. ಜೂನ್ 26ರಂದು ಹೊಸಪೇಟೆ, 27ರಂದು ಸಿರುಗುಪ್ಪ ಹಾಗೂ ಹೂವಿನಹಡಗಲಿ, 28ರಂದು ಸಂಡೂರು ಹಾಗೂ ಕೂಡ್ಲಿಗಿ, 29ರಂದು ಬಳ್ಳಾರಿ ಹಾಗೂ ಹಗರಿಬೊಮ್ಮನಹಳ್ಳಿ ತಾಲೂಕಿನ ಸಾರ್ವಜನಿಕ ಕುಂದುಕೊರತೆಗಳನ್ನು ಇತ್ಯರ್ಥಪಡಿಸಲಿದ್ದಾರೆ. ಆಯಾ ದಿನಾಂಕಗಳಂದು ಸಂಬಂಧಿಸಿದ ತಾಲೂಕಿನ ಪ್ರವಾಸಿ ಮಂದಿರಗಳಲ್ಲಿ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1ಗಂಟೆವರೆಗೆ ಸಾರ್ವಜನಿಕರ ಅಹವಾಲು ಸ್ವೀಕರಿಸಿ ವಿಚಾರಿಸಲಿದ್ದು, ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸಲಿದ್ದಾರೆ.  ಬಳ್ಳಾರಿಯ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ ಜೆ. ರಮೇಶ್ ಅವರ ನೇತೃತ್ವದಲ್ಲಿ ಸಿರುಗುಪ್ಪ, ಸಂಡೂರು, ಬಳ್ಳಾರಿ ತಾಲೂಕಿನ ಕುಂದುಕೊರತೆಗಳು ಹಾಗೂ ಹೊಸಪೇಟೆಯ ಲೋಕಾಯುಕ್ತ ಉಪಾಧೀಕ್ಷಕ ಎಂ. ಪಾಷ ಅವರ ನೇತೃತ್ವದಲ್ಲಿ ಹೊಸಪೇಟೆ, ಹೂವಿನಹಡಗಲಿ, ಹಗರಿಬೊಮ್ಮನಹಳ್ಳಿ, ಕೂಡ್ಲಿಗಿ ತಾಲೂಕಿನ ಕುಂದುಕೊರತೆಗಳನ್ನು ಸ್ವೀಕರಿಸಲಾಗುವುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement