ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು
ಹೂವಿನಹಡಗಲಿ: ತಾಲೂಕಿನ ಲಿಂಗನಾಯಕನಹಳ್ಳಿ ಬಳಿ ತುಂಗಭದ್ರಾ ನದಿಯಲ್ಲಿ ನೀರು ಕುಡಿಯಲು ಹೋದಾಗ ಕಾಲು ಜಾರಿ ವ್ಯಕ್ತಿಯೋರ್ವ ಸಾವಪ್ಪಿರುವ ದುರಂತ ಮಂಗಳವಾರ ಸಂಜೆ ನಡೆದಿದೆ. ದುರ್ಘಟನೆಯಲ್ಲಿ ಸಾವನ್ನಪ್ಪಿದ ವ್ಯಕ್ತಿಯನ್ನು ಹಾವೇರಿ ಜಿಲ್ಲೆ ರಾಣೀಬೆನ್ನೂರು ತಾಲೂಕಿನ ಗುತ್ತಲ ಗ್ರಾಮದ ರಾಜು ಚಿಕ್ಕಮಠ (46) ಎಂದು ಹೇಳಲಾಗುತ್ತಿದೆ. ರಾತ್ರಿವರೆಗೂ ಶವ ಪತ್ತೆಯಾಗಿಲ್ಲವೆಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಹಿರೇಹಡಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜು. 1ರಂದು ರಕ್ತದಾನ ಶಿಬಿರ
ಬಳ್ಳಾರಿ: ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ಬ್ಯಾಂಕಿನ ಸ್ಥಾಪನಾ ದಿನಾಚರಣೆ ಪ್ರಯುಕ್ತ ಜು. 1ರಂದು ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಡಾ. ಕೆ. ನಾಗರಾಜ್ ರಾವ್ ತಿಳಿಸಿದ್ದಾರೆ. ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ಭಾರತೀಯ ಸ್ಟೇಟ್ ಬ್ಯಾಂಕ್ ಪ್ರಧಾನ ಶಾಖೆ ಹಾಗೂ ವಿಮ್ಸ್ ಇವುಗಳ ಸಂಯುಕ್ತಾಶ್ರಯದಲ್ಲಿ ಜು.1ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಶಿಬಿರ ನಡೆಯಲಿದೆ. ಆಸಕ್ತಿಯುಳ್ಳ ಸಾರ್ವಜನಿಕರು ರಕ್ತದಾನ ಮಾಡಬಹುದು.