ಬಳ್ಳಾರಿ: 29ರಂದು ಉಪನ್ಯಾಸ ಕಾರ್ಯಕ್ರಮ
ಬಳ್ಳಾರಿ: ಸಾಂಖ್ಯಿಕ ತಜ್ಞ ಪ್ರೊ. ಪಿ.ಸಿ. ಮಹಲನೋಬಿಸ್ ಅವರ ಜನ್ಮದಿನಾಚರಣೆ ಪ್ರಯುಕ್ತ ಜೂ. 29ರಂದು ಬೆಳಗ್ಗೆ 10.45 ಗಂಟೆಗೆ ನಗರದ ಇಂಡೋ-ಅಮೆರಿಕನ್ ಇಂಟರ್ ನ್ಯಾಷನಲ್ ಕಾಲೇಜಿನಲ್ಲಿ ಉಪನ್ಯಾಸ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಸಾಂಖ್ಯಿಕ ಅಧಿಕಾರಿ ತಿಳಿಸಿದ್ದಾರೆ. ಕಾರ್ಯಕ್ರಮವನ್ನು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿ ಮಂಜಪ್ಪ ಡಿ. ಹೊಸಮನಿ ಉದ್ಘಾಟಿಸಲಿದ್ದಾರೆ. ವಿವಿಯ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಬಸವರಾಜ ಬೆಣ್ಣೆ, ಜಿಲ್ಲಾ ಉದ್ಯೋಗಾಧಿಕಾರಿ ಹಟ್ಟೆಪ್ಪ, ಕಾರ್ಮಿಕ ಅಧಿಕಾರಿ ನಾಗರಾಜ ಉಪನ್ಯಾಸ ನೀಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.