ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಧನಸಹಾಯ

Rashmi Kasaragodu
Updated On : 28 Jun 2013, 11:42 am

ಬಳ್ಳಾರಿ: ಜಿಲ್ಲಾ ಡಾ.ಬಿ.ಆರ್ ಅಂಬೇಡ್ಕರ್ ಸಂಘದಿಂದ ದೀನ-ದಲಿತರ, ಬಡ ಪ್ರತಿಭಾವಂತ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಆರ್ಥಿಕ ನೆರವು ಸೇರಿದಂತೆ ಇತರ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದು ಸಂಘದ ನೂತನ ಜಿಲ್ಲಾಧ್ಯಕ್ಷ ಎಂ.ವಿ. ಎರುಕಲಸ್ವಾಮಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸಂಘ ದತ್ತು ತೆಗೆದುಕೊಳ್ಳಲಿದ್ದು, ಅವರ ಶೈಕ್ಷಣಿಕ ಪ್ರಗತಿಗೆ ಬೆನ್ನೆಲುಬಾಗಿ ನಿಲ್ಲಲಿದೆ. ಜತೆಗೆ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಐಎಎಸ್, ಐಪಿಎಸ್, ಕೆಎಎಸ್ ಪರೀಕ್ಷೆಗಳಿಗೆ, ಬ್ಯಾಂಕಿಂಗ್ ಪರೀಕ್ಷೆಗಳಿಗೆ ತರಬೇತಿ ಕೊಡಿಸಲಾಗುವುದು.
ಎಂಬಿಬಿಎಸ್, ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೂ ಸಹಾಯ ಮಾಡಲಾಗುವುದು ಎಂದು ಹೇಳಿದ್ದಾರೆ. ಜಿಲ್ಲೆಯ ಪರಿಶಿಷ್ಟ ಜಾತಿ ಜನಾಂಗದ ಬಡ ಪ್ರತಿಭಾವಂತ ವಿದ್ಯಾರ್ಥಿಗಳು ಅಂಕಪಟ್ಟಿ, ಜಾತಿ ಪ್ರಮಾಣ ಪತ್ರದೊಂದಿಗೆ ಜೂ. 30ರೊಳಗೆ ಅರ್ಜಿ ಸಲ್ಲಿಸಬಹುದು. ಜಿಲ್ಲೆಯ 10 ಬಡ ವಿದ್ಯಾರ್ಥಿಗಳನ್ನು ದತ್ತು ತೆಗೆದುಕೊಂಡು ಅವರ ವಿದ್ಯಾಭ್ಯಾಸದ ಸಂಪೂರ್ಣ ಖರ್ಚನ್ನು ಸಂಘದಿಂದಲೇ ಭರಿಸಲಾಗುತ್ತದೆ. ಸಂಘವನ್ನು ಬಲಪಡಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು, ಜತೆಗೆ ಸಮಾಜಮುಖಿ ಕೆಲಸಗಳನ್ನು ಹಮ್ಮಿಕೊಳ್ಳಲಿದೆ. ದೀನ-ದಲಿತರು ತಮ್ಮ ಯಾವುದೇ ಸಮಸ್ಯೆ ಅಥವಾ ನೆರವು ಬೇಕಾದಲ್ಲಿ ಮೊ.ಸಂ-9448142588ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement