ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಎಲ್ಲರೂ ರಕ್ತದಾನ ಮಾಡಿ: ಗುಬಾಜಿ

Rashmi Kasaragodu
Updated On : 30 Jun 2013, 1:08 am

ಬಳ್ಳಾರಿ: ಪ್ರತಿಯೊಬ್ಬರೂ ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಬೇಕು ಎಂದು ಜಿಪಂ ಅಧ್ಯಕ್ಷೆ ಸುಮಂಗಳಮ್ಮ ಗುಬಾಜಿ ಹೇಳಿದರು.
ರಾಜ್ಯ ರಕ್ತ ಚಾಲನಾ ಪರಿಷತ್, ಜಿಲ್ಲಾ ಟಾಸ್ಕ್ಪೋರ್ಸ್ ಸಮಿತಿ, ಭಾರತೀಯ ರೆಡ್ಕ್ರಾಸ್, ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಇಲಾಖೆ ಹಾಗೂ ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ನಿರ್ವಾಹಕ ಘಟಕಗಳ ಸಹಯೋಗದಲ್ಲಿ ನಗರದ ವಿಮ್ಸ್ನ ಶಿಕ್ಷಕರ ಭವನದಲ್ಲಿ ಏರ್ಪಡಿಸಿದ್ದ ವಿಶ್ವ ರಕ್ತದಾನಿಗಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ರಕ್ತದಾನ ಮಹಾದಾನವಾಗಿದ್ದು, ರಸ್ತೆ ಅಪಘಾತಗಳು ಸಂಭವಿಸಿದಾಗ ಮತ್ತು ಇತರೆ ತುರ್ತು ಸಂದರ್ಭಗಳಲ್ಲಿ ರಕ್ತದ ಅವಶ್ಯಕತೆ ಇರುವ ರೋಗಿಗಳಿಗೆ ಪ್ರತಿಯೊಬ್ಬರೂ ರಕ್ತದಾನ ಮಾಡುವ ಮೂಲಕ ಸಹಾಯ ಮಾಡುವಲ್ಲಿ ಮುಂದಾಗಬೇಕು ಎಂದು ಸಲಹೆ ನೀಡಿದರು. ವಿಮ್ಸ್ ಪ್ರಭಾರಿ ನಿರ್ದೇಶಕ ಡಾ. ಸಿದ್ದಲಿಂಗಪ್ಪ ಕರ್ಜಗಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ರಕ್ತದಾನಿಗಳಿಗೆ ಸನ್ಮಾನ:
ದಾಖಲೆ ಪ್ರಮಾಣದಲ್ಲಿ ರಕ್ತ ಸಂಗ್ರಹಿಸಿ, ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಶಿಬಿರ ನಡೆಸಿರುವ ಟಚ್ ಫಾರ್ ಲೈಫ್ ಫೌಂಡೇಷನ್, ಆರ್ಬಿವೈಎಂ ಎಂಜಿನಿಯರಿಂಗ್ ಕಾಲೇಜು ಹಾಗೂ ಬಿಐಟಿಎಂ ಕಾಲೇಜಿನ ಸಂಸ್ಥೆಗಳನ್ನು ಅಭಿನಂದಿಸಲಾಯಿತು. 137 ಬಾರಿ ರಕ್ತದಾನ ಮಾಡಿದ್ದ ರೆಡ್ಕ್ರಾಸ್ನ ಜಿಲ್ಲಾ ಕಾರ್ಯದರ್ಶಿ ಡಾ. ನಾಗರಾಜ್ ಸೇರಿದಂತೆ ಹೆಚ್ಚು ಬಾರಿ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿದವರನ್ನು ಸನ್ಮಾನಿಸಲಾಯಿತು.
ವಿಮ್ಸ್ ನಿವೃತ್ತ ಪ್ರಾಚಾರ್ಯ ಡಾ. ಟೇಕೂರ ರಾಮನಾಥ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಮಾಧವರಾವ್ ಪಾಟೀಲ, ಜಿಲ್ಲಾ ಏಡ್ಸ್ ನಿಯಂತ್ರಣಾ ಘಟಕದ ಡಾ. ನರಸಿಂಹಮೂರ್ತಿ, ಡಾ. ಪಂಪಾಪತಿ, ಪ್ರೊ. ಸತ್ಯನಾರಾಯಣ, ಡಾ. ಶಂಕರ್ ಸೇರಿದಂತೆ ಇತ ರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement