ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿ

Mainashree
Updated On : 3 Mar 2013, 11:38 am

ಕನ್ನಡಪ್ರಭ ವಾರ್ತೆ, ಹೊಸಪೇಟೆ, ಮಾ. 2
ಊರಿನ ಅಭಿವೃದ್ಧಿಗಾಗಿ ಪಕ್ಷಾತೀತವಾಗಿ ಒಂದಾಗುವ ಮೂಲಕ ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸುವ ಮನೋಭಾವ ಪ್ರತಿಯೊಬ್ಬರಲ್ಲಿಯೂ ಬರಬೇಕಾಗಿದೆ ಎಂದು ಹಗರಿಬೊಮ್ಮನಹಳ್ಳಿ ಕ್ಷೇತ್ರದ ಶಾಸಕ ಕೆ. ನೇಮಿರಾಜ್ ನಾಯ್ಕ ಹೇಳಿದರು.
ಅವರು ತಾಲೂಕಿನ ಮರಿಯಮ್ಮನಹಳ್ಳಿಯಲ್ಲಿ ದುರ್ಗಾದಾಸ್ ಕಲಾಮಂದಿರದ ಬಳಿ ಶನಿವಾರ ಹಮ್ಮಿಕೊಂಡಿದ್ದ ಕರ್ನಾಟಕ ರೂರಲ್ ಇನ್‌ಫ್ರಾಸ್ಟ್ರಕ್ಚರ್ ಡೆವಲಪ್‌ಮೆಂಟ್ ನಿರ್ಮಿಸುವ ಸಾಂಸ್ಕೃತಿಕ ಭವನಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ಹಗರಿಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿದ್ದು, ಜನರ ಕಣ್ಣಿಗೆ ಕಾಣಿಸುತ್ತಿವೆ. ಕಲಾವಿದರು ನಾಟಕ ಕಲೆ ಪ್ರದರ್ಶಿಸುವಾಗ ಮಳೆ ಬಂದರೆ ನಾಟಕ ಬಂದ್ ಮಾಡುವ ಸ್ಥಿತಿ ಇರುವುದರಿಂದ ದುರ್ಗಾದಾಸ ಕಲಾ ಮಂದಿರದ ಮುಂದೆ ರು. 10 ಲಕ್ಷ ವೆಚ್ಚದಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣ ಮಾಡಲಾಗುತ್ತಿದೆ. ಇದೇ ರೀತಿಯಲ್ಲಿ ಚಿಲಕನಹಟ್ಟಿ ಗ್ರಾಮದಲ್ಲಿ ಸಾಂಸ್ಕೃತಿಕ ಭವನ ನಿರ್ಮಿಸಲಾಗುತ್ತಿದೆ ಎಂದರು.
ಮುಂದಿನ ದಿನಗಳಲ್ಲಿ ಮರಿಯಮ್ಮನಹಳ್ಳಿಯನ್ನು ತಾಲೂಕು ಕೇಂದ್ರವನ್ನಾಗಿಸಲು ಹಾಗೂ ಮರಿಯಮ್ಮನಹಳ್ಳಿಯನ್ನು ಪಟ್ಟಣ ಪಂಚಾಯಿತಿಯನ್ನಾಗಿ ರೂಪಿಸಲು ಸಹ ಮಖ್ಯಮಂತ್ರಿ ಜಗದೀಶ್ ಶೆಟ್ಟರ್ ಬಳಿ ಮಾರ್ಚ್ 15ರ ನಂತರ ನಿಯೋಗದಲ್ಲಿ ತೆರಳಲಾಗುತ್ತದೆ ಎಂದು ಅವರು ಹೇಳಿದರು.
ಮರಿಯಮ್ಮನಹಳ್ಳಿಯ ಗುರುಪಾದ ದೇವರ ಮಠದ ಮಲ್ಲಿಕಾರ್ಜುನ ಶಿವಾಚಾರ್ಯಸ್ವಾಮೀಜಿ, ಸ್ಥಳೀಯ ಮುಖಂಡರಾದ ಕೊಟ್ಗಿ ನಾಗಪ್ಪ, ಡಿ. ರಾಘವೇಂದ್ರ ಶೆಟ್ಟಿ, ಎಂ. ಬದ್ರಿನಾಥ ಶೆಟ್ಟಿ, ವಸ್ತ್ರದ ವೀರಭದ್ರಯ್ಯ, ಲಲಿತ ಕಲಾರಂಗದ ಅಧ್ಯಕ್ಷ ಹುರುಕೊಳ್ಳಿ ಮಂಜುನಾಥ, ಲಲಿತ ಕಲಾರಂಗದ ಮಾಜಿ ಅಧ್ಯಕ್ಷ ಹಾಗೂ ವೈದ್ಯ ಡಾ. ಬಿ. ಅಂಬಣ್ಣ, ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯ ಬಿ. ನಾಗೇಂದ್ರ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement