ಬಳ್ಳಾರಿ

ನೀತಿಸಂಹಿತೆ ಉಲ್ಲಂಘಿಸಬೇಡಿ

ಕೊಟ್ಟೂರು: ಲಕ್ಷಾಂತರ ಭಕ್ತರು ಸೇರುವ ಶ್ರೀಗುರು ಕೊಟ್ಟೂರೇಶ್ವರ ಸ್ವಾಮಿ ಜಾತ್ರಾ ಮಹೋತ್ಸವವನ್ನು ಮಾ. 7ರಂದು ನಡೆಯುವ ಕೊಟ್ಟೂರು ಪಪಂ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ದುರುಪಯೋಗಪಡಿಸಿಕೊಂಡರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ. ಅಭ್ಯರ್ಥಿಗಳ ಸಂಪೂರ್ಣ ಚಲನವಲನಗಳನ್ನು ಪ್ರತಿ ಹಂತದಲ್ಲೂ ಚಿತ್ರೀಕರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಕೂಡ್ಲಿಗಿ ತಹಸೀಲ್ದಾರ್ ಜವರೇಗೌಡ ಎಚ್ಚರಿಸಿದರು.
ಇಲ್ಲಿನ ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಪಪಂಗೆ ಸ್ಪರ್ಧಿಸಿರುವ ಅಭ್ಯರ್ಥಿಗಳ ಸಭೆಯಲ್ಲಿ ಮಾತನಾಡಿದ ಅವರು, ಅಭ್ಯರ್ಥಿಗಳು ಯಾವುದೇ ಹಂತದಲ್ಲೂ ಧಾರ್ಮಿಕ ಕಾರ್ಯಕ್ರಮಗಳನ್ನು ಚುನಾವಣಾ ಪ್ರಚಾರಕ್ಕೆ ಬಳಸಿಕೊಳ್ಳದಂತೆ ನಿಗಾ ವಹಿಸುತ್ತಿದ್ದೇವೆ. ಮತದಾನದ ಮುನ್ನಾ ದಿನ ಮಾ. 6ರಂದು ಕೊಟ್ಟೂರೇಶ್ವರ ಸ್ವಾಮಿಯ ರಥೋತ್ಸವ ಜರುಗಲಿದೆ. ಇದಕ್ಕಾಗಿ ಎಲ್ಲಾ ಬಗೆಯ ಸಿದ್ಧತೆಗಳನ್ನು ಈಗಾಗಲೇ ಕೈಗೊಳ್ಳಲಾಗಿದೆ. ರಥೋತ್ಸವದ ನಂತರ ನಡೆಯುವ ಮತದಾನದ ವೇಳೆ ಮತಗಟ್ಟೆ ಸಮೀಪದಲ್ಲಿ ಯಾವುದೇ ಚಟುವಟಿಕೆ ನಡೆಸದಂತೆ ನಿರ್ಬಂಧಿಸಲಾಗುತ್ತದೆ ಎಂದರು.
ನಿರ್ಭಯದಿಂದ ನಡೆಯಲಿ: ಮತದಾರರು ನಿಷ್ಪಕ್ಷಪಾತ ಮತ್ತು ನಿರ್ಭಯವಾಗಿ ಮತದಾನ ಮಾಡಲು ಎಲ್ಲ ವ್ಯವಸ್ಥೆ ಕೈಗೊಳ್ಳಲಾಗುವುದು. ಮತದಾನಕ್ಕಾಗಿ ಯಾರಾದರೂ ಹೊರಗಿನವರನ್ನು ಕರೆತರುವ ಪ್ರಯತ್ನ ನಡೆಸಿದರೆ ಅಂಥವರನ್ನು ತಕ್ಷಣ ವಶಕ್ಕೆ ತೆಗೆದುಕೊಂಡು ಕ್ರಮ ಜರುಗಿಸುತ್ತೇವೆ. ಯಾವುದೇ ಹಂತದಲ್ಲಿ ಚುನಾವಣಾ ಕಾರ್ಯಕ್ಕೆ ಭಂಗ ಬಾರದಂತೆ ಪ್ರತಿಯೊಬ್ಬ ಅಭ್ಯರ್ಥಿ ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದು ತಿಳಿಸಿದರು.
ಮತ ಕೇಳುವ ನೆಪದಲ್ಲಿ ಉಡುಗೊರೆ, ಹಣ ವಿತರಿಸಬಾರದು. ಪ್ರಚಾರಕ್ಕೆ ಬಳಸುವ ಪ್ರತಿಯೊಂದರ ಬಗ್ಗೆ ಚುನಾವಣಾಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ. ಪ್ರತಿ ವಿವರಗಳನ್ನು ಅಭ್ಯರ್ಥಿಗಳು ಕಾಲಕಾಲಕ್ಕೆ ಚುನಾವಣಾಧಿಕಾರಿಗಳಿಗೆ ಸಲ್ಲಿಸಬೇಕು. ರು. 1 ಲಕ್ಷವರೆಗೆ ಮಾತ್ರ ಹಣ ವ್ಯಯಿಸಬೇಕು. ಮತದಾರರನ್ನು ಮತ ಹಾಕಲು ವಾಹನ ಮೂಲಕ ಕರೆತರಲು ಪ್ರಯತ್ನಿಸಿದರೆ, ಕರೆತಂದ ವ್ಯಕ್ತಿಯನ್ನು ವಾಹನ ಸಮೇತ ವಶಪಡಿಸಿಕೊಳ್ಳಲಾಗುವುದು. ಚುನಾವಣಾ ನೀತಿ ಸಂಹಿತೆಯನ್ನು ಯಾರೊಬ್ಬರೂ ಉಲ್ಲಂಘಿಸಬಾರದು ಎಂದು ಎಚ್ಚರಿಸಿದರು. ಪಪಂ ಚುನಾವಣಾಧಿಕಾರಿ ಸಲೀಂ ಹಲಗೇರಿ, ಸಿಪಿಐ ಗುರುರಾಜ್, ಮುಖ್ಯಾಧಿಕಾರಿ ಹನುಮಂತಮ್ಮ, ಸಹಾಯಕ ಚುನಾವಣಾಧಿಕಾರಿ ಮಂಜುನಾಥ ಹಾಜರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ದೇಶಕ್ಕೆ ಹೇಗೆ ಬೆಂಕಿ ಹಚ್ಚಬೇಕು ಎಂಬುದನ್ನು ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ: ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!

15 ವರ್ಷದ ಹಳೆ ವಿಡಿಯೋ ಅದಂತೆ.., ರಾಜಕೀಯ ತೆವಲಿಗೆ ಮಾಡುತ್ತಿದ್ದಾರೆ: ಬಿ.ಕೆ ಹರಿಪ್ರಸಾದ್ ಗರಂ