ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಇಂದಿನಿಂದ ಕುರುವತ್ತಿ ಬಸವೇಶ್ವರ, ಮಲ್ಲಿಕಾರ್ಜುನ ಜಾತ್ರೆ

Parashurama
Updated On : 10 Mar 2013, 12:28 pm

ಕನ್ನಡಪ್ರಭ ವಾರ್ತೆ, ಹೂವಿನಹಡಗಲಿ, ಮಾ. 9
ಐತಿಹಾಸಿಕ ಮತ್ತು ಪೌರಾಣಿಕ ಪ್ರಸಿದ್ಧ ಪಶ್ಚಿಮ ವಾಹಿನಿ, ದಕ್ಷಿಣ ಕಾಶಿ ಎಂದೇ ಕರೆಯಲ್ಪಡುವ ತುಂಗಭದ್ರಾ ನದಿ ತೀರದ ಪವಿತ್ರ ಸ್ಥಳ ಕುರುವತ್ತಿ ಬಸವೇಶ್ವರ ಮತ್ತು ಮಲ್ಲಿಕಾರ್ಜುನ ದೇವರ ಜಾತ್ರೆ ಮಾ. 10 ಶಿವರಾತ್ರಿಯಂದು ಆರಂಭವಾಗಲಿದೆ.
ಶ್ರೀ ಬಸವೇಶ್ವರ ಮತ್ತು ಮಲ್ಲಿಕಾರ್ಜುನ ದೇವರಿಗೆ ಕಂಕಣ ಧಾರಣ ಸೇವೆ ಮತ್ತುಉತ್ಸವ ಮೂರ್ತಿಯ ಪ್ರಭಾವಳಿಯನ್ನು ತುಂಗಭದ್ರಾ ನದಿಯಿಂದ ಸುಕ್ಷೇತ್ರದಲ್ಲಿರುವ ಸಿಂಹಾಸನ ಕಟ್ಟೆಯವರೆಗೂ ಸಲಕ ವಾದ್ಯಗಳೊಂದಿಗೆ ಭವ್ಯ ಮೆರವಣಿಗೆ ಮಾಡುವ ಮೂಲಕ ಜಾತ್ರೆಗೆ ಚಾಲನೆ ನೀಡಲಾಗುತ್ತಿದೆ.
ಮಾ. 10ರಂದು ಮಹಾಶಿವರಾತ್ರಿಯಂದು ಮಲ್ಲಿಕಾರ್ಜುನ ಸ್ವಾಮಿ ಮತ್ತು ಬಸವೇಶ್ವರ ಮೂರ್ತಿಗಳಿಗೆ ವಿಶೇಷ ಪೂಜೆ ನಂತರ ಸರ್ಕಾರದಿಂದ ವಿತರಣೆಯಾಗುವ ಗಂಗಾಜಲ ವಿತರಿಸಲಾಗುವುದು ಎಂದು ದೇವಸ್ಥಾನದ ಕಾರ್ಯನಿರ್ವಾಣಾಧಿಕಾರಿ ಅರವಿಂದ ಸುತಗುಂಡಿ ತಿಳಿಸಿದ್ದಾರೆ.
ಮಾ. 11ರಂದು ಮಹಾಶಿವರಾತ್ರಿಯ ಅಮಾವಾಸ್ಯೆಯಂದು ಶ್ರೀ ಬಸವೇಶ್ವರ ಮಲ್ಲಿಕಾರ್ಜುನ ಸ್ವಾಮಿಯ ಸಂಭ್ರಮದ ರಥೋತ್ಸವ ನಡೆಯಲಿದ್ದು, ಹುಬ್ಬಳ್ಳಿ, ದಾವಣಗೆರೆ, ಗದಗ, ರಾಣಿಬೆನ್ನೂರು, ಧಾರವಾಡ, ಹಾವೇರಿ, ಶಿವಮೊಗ್ಗ, ಬೆಂಗಳೂರು ಸೇರಿದಂತೆ ರಾಜ್ಯದ ಮೂಲೆ ಮೂಲೆಗಳಿಂದ 5-6 ಲಕ್ಷಕ್ಕೂ ಹೆಚ್ಚು ಭಕ್ತರು ಆಗಮಿಸುತ್ತಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments