ಶೂನ್ಯಕ್ಕೆ ಕುಸಿದ ಬಿಜೆಪಿ
ಬಳ್ಳಾರಿ: ಬಿಜೆಪಿಗೆ ಬಳ್ಳಾರಿ ಮಟ್ಟಿಗೆ ತೀವ್ರ ಮುಖಭಂಗವಾಗಿದೆ. ರೆಡ್ಡಿ ಸಹೋದರರು ಹಾಗೂ ಶ್ರೀರಾಮುಲು ಹೊರತಾಗಿಯೂ ಬಳ್ಳಾರಿ ಜಿಲ್ಲೆಯಲ್ಲಿ ಬಿಜೆಪಿ ಇದೆ ಎಂಬುದನ್ನು ತೋರಿಸಲು ಹೋಗಿದ್ದ ಬಿಜೆಪಿಗೆ ಸಹಜವಾಗಿಯೇ ಭ್ರಮನಿರಸನವಾಗಿದೆ. 2007ರಲ್ಲಿ ರೆಡ್ಡಿ ಸಹೋದರರು, ಶ್ರೀರಾಮುಲು ನೇತೃತ್ವದ ಬಿಜೆಪಿ 30 ಸ್ಥಾನಗಳಲ್ಲಿ ಗೆಲವು ಸಾಧಿಸಿತ್ತು. ಆದರೆ ಈ ಬಾರಿ ಒಂದೇ ಒಂದು ಸ್ಥಾನದಲ್ಲೂ ಗೆಲುವು ಸಾಧಿಸುವಲ್ಲಿ ಬಿಜೆಪಿ ವಿಫಲವಾಗಿದೆ. ಜೆಡಿಎಸ್ ಪಕ್ಷ ಕಳೆದ ಬಾರಿಯ ಚುನಾವಣೆಯಲ್ಲಿ 3 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು, ಆದರೆ ಈ ಬಾರಿ ಕೇವಲ 1 ಸ್ಥಾನಕ್ಕೆ ತೃಪ್ತಿಗೊಂಡಿದೆ. ಕೆಜೆಪಿ ಕೂಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಅಷ್ಟಾಗಿ ಪರಿಣಾಮ ಬೀರಿಲ್ಲ. ಕಂಪ್ಲಿ ಪುರಸಭೆಯಲ್ಲಿ 2 ಸ್ಥಾನದಲ್ಲಿ ಗೆಲುವು ಸಾಧಿಸಿ ಖಾತೆ ತೆರೆದಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.