ಕೈ ಟಿಕೆಟ್ ಆಕಾಂಕ್ಷಿಗಳ ಬಗ್ಗೆ ಚರ್ಚೆ
ಬಳ್ಳಾರಿ: ಸ್ಧಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಕಾಂಗ್ರೆಸ್ ಪಕ್ಷ ಮುಂದಿನ ವಿಧಾನಸಭೆ ಚುನಾವಣಾ ಆಕಾಂಕ್ಷಿಗಳ ಪಟ್ಟಿ ಸಿದ್ಧಪಡಿಸಿ ಎಐಸಿಸಿಗೆ ಕಳುಹಿಸಿಕೊಡುವ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ರೆಸಾರ್ಟ್ವೊಂದರಲ್ಲಿ ಕೆಪಿಸಿಸಿಯ ಚುನಾವಣಾ ಸಮಿತಿ ಸಭೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.
ಸಭೆಯಲ್ಲಿ ಬಳ್ಳಾರಿ ನಗರ ಮತ್ತು ವಿಜಯನಗರ(ಹೊಸಪೇಟೆ) ವಿಧಾನಸಭಾ ಕ್ಷೇತ್ರದ ಕುರಿತಾಗಿ ಚರ್ಚೆ ನಡೆದಿದ್ದು, ಬಳ್ಳಾರಿ ನಗರ ಕ್ಷೇತ್ರದಿಂದ ಕಾಂಗ್ರೆಸ್ನ 10ಕ್ಕೂ ಹೆಚ್ಚು ಆಕಾಂಕ್ಷಿಗಳು ಟಿಕೆಟ್ಗಾಗಿ ಅರ್ಜಿ ಸಲ್ಲಿಸಿದ್ದರು. ಚುನಾವಣಾ ಸಮಿತಿಯಲ್ಲಿ ಕೆ.ಸಿ. ಕೊಂಡಯ್ಯ, ದಿವಾಕರ ಬಾಬು, ಹೊತೂರು ಮಹಮ್ಮದ್ ಇಕ್ಬಾಲ್ ಮತ್ತು ಅನಿಲ್ ಲಾಡ್ ಅವರ ಆಯ್ಕೆಯ ಬಗ್ಗೆ ಚರ್ಚೆ ನಡೆದಿದೆ. ಇನ್ನೂ ಈ ಕುರಿತು ಚರ್ಚೆ ಮುಂದುವರೆದಿದ್ದು, ಈ ನಾಲ್ವರ ಹೆಸರು ಸಭೆಯಲ್ಲಿ ಬಹುವಾಗಿ ಕೇಳಬಂದಿದೆ ಎಂದು ಮೂಲಗಳು ತಿಳಿಸಿವೆ. ಅದೇ ರೀತಿಯಾಗಿ ವಿಜಯನಗರ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆದಿದ್ದು, ಇಲ್ಲಿ ಕೂಡ 9ಕ್ಕೂ ಹೆಚ್ಚು ಆಕಾಂಕ್ಷಿಗಳು ಟಿಕೆಟ್ಗಾಗಿ ಅರ್ಜಿ ಸಲ್ಲಿಸಿದ್ದು, ಅವರಲ್ಲಿ ಗವಿಯಪ್ಪ ಮತ್ತು ದೀಪಕ್ಕುಮಾರ್ ಸಿಂಗ್ ಹೆಸರು ಚರ್ಚೆಯಲ್ಲಿವೆ. ಈ ಬಗ್ಗೆ ಮಾ.17ರಂದು ಕೂಡ ಚರ್ಚೆ ಮುಂದುವರೆಯಲಿದೆ. ಆಯಾ ಕ್ಷೇತ್ರಗಳ ಮೂರ್ನಾಲ್ಕು ಆಕಾಂಕ್ಷಿಗಳ ಆಯ್ಕೆ ಪಟ್ಟಿಯನ್ನು ಸಿದ್ಧಪಡಿಸಿ ಎಐಸಿಸಿಗೆ ಕಳುಹಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಚರ್ಚಿತ ವಿಷಯಗಳಲ್ಲಿ ಬಳ್ಳಾರಿ ಮತ್ತು ಹೊಸಪೇಟೆ ವಿಧಾನಸಭಾ ಕ್ಷೇತ್ರಗಳಿಂದ ಹೆಚ್ಚಿನ ಆಕಾಂಕ್ಷಿಗಳು ಆಯ್ಕೆ ಪಟ್ಟಿಯಲ್ಲಿ ಸೇರಬಹುದು ಎಂದು ಹೇಳಲಾಗುತ್ತಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.