ಅಬಕಾರಿ ದೂರು ದಾಖಲಿಸಲು ನಿಯಂತ್ರಣಾ ಕೊಠಡಿ
ಕನ್ನಡಪ್ರಭ ವಾರ್ತೆ, ಬಳ್ಳಾರಿ, ಮಾ. 31
ವಿಧಾನಸಭಾ ಚುನಾವಣೆ ಪ್ರಯುಕ್ತ ಅಕ್ರಮ ಅಬಕಾರಿ ಚಟುವಟಿಕೆಗಳಿಗೆ ಸಂಬಂಧಿಸಿದ ದೂರುಗಳನ್ನು ಸ್ವೀಕರಿಸಲು ನಿಯಂತ್ರಣಾ ಕೊಠಡಿಯನ್ನು ತೆರೆಯಲಾಗಿದೆ ಎಂದು ಅಬಕಾರಿ ಇಲಾಖೆ ಉಪ ಆಯುಕ್ತರು ತಿಳಿಸಿದ್ದಾರೆ.
ದೂರುದಾರರು ನಿಯಂತ್ರಣಾ ಕೊಠಡಿ ದೂರವಾಣಿ ಸಂಖ್ಯೆ - 08392-277905ನ್ನು ಸಂಪರ್ಕಿಸಿ ದೂರು ದಾಖಲಿಸಬಹುದೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.