15ರಂದು ಮಿನಿ ಉದ್ಯೋಗ ಮೇಳ
ಬಳ್ಳಾರಿ: ಕೌಶಲ್ಯ ಆಯೋಗ, ಉದ್ಯೋಗ ಮತ್ತು ತರಬೇತಿ ಇಲಾಖೆ, ಕರ್ನಾಟಕ ವೃತ್ತಿ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರಗಳ ಸಹಯೋಗದಲ್ಲಿ ಮೇ 15ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಮಟ್ಟದ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮೇಳ ನಡೆಯಲಿದ್ದು, ಧಾರವಾಡದ ಬೆಲ್ಲದ್ ಮೋಟಾರ್ಸ್ ಕಂಪನಿ ಭಾಗವಹಿಸಲಿದೆ. ಮೇಳದಲ್ಲಿ ಟೆಕ್ನಿಷಿಯನ್ ಹಾಗೂ ಅಸಿಸ್ಟೆಂಟ್ ಟಿಕ್ನಿಷಿಯನ್ ಹುದ್ದೆಗಳಿಗೆ ಆಯ್ಕೆ ನಡೆಸಲಾಗುವುದು. ಡೀಸೆಲ್ ಮೆಕ್ಯಾನಿಕ್, ಮೋಟಾರ್ ಮೆಕ್ಯಾನಿಕ್, ಆಟೋ ಎಲೆಕ್ಟ್ರಿಷಿಯನ್, ಡಿಎಇನಲ್ಲಿ ಐಟಿಐ ಪಾಸಾದವರು ಭಾಗವಹಿಸಲು ಅರ್ಹರಾಗಿದ್ದಾರೆ. ಆಸಕ್ತರು ತಮ್ಮ ಸ್ವವಿವರಗಳೊಂದಿಗೆ ವಿದ್ಯಾರ್ಹತೆ ಪ್ರಮಾಣಪತ್ರ ಹಾಜರುಪಡಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೊ. 9844444958, 9036422052 ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪಿ.ಎಸ್. ಹಟ್ಟೆಪ್ಪ ತಿಳಿಸಿದ್ದಾರೆ.