ಹೊಸಪೇಟೆ: ಸಿದ್ದರಾಮಯ್ಯ ಭಾವಚಿತ್ರಕ್ಕೆ ಕ್ಷೀರಾಭಿಷೇಕ
ಕನ್ನಡಪ್ರಭ ವಾರ್ತೆ, ಹೊಸಪೇಟೆ, ಮೇ 12
ಕರ್ನಾಟಕದ 28ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಸೋಮವಾರ ಪ್ರಮಾಣ ವಚನ ಸ್ವೀಕರಿಸುವ ಹಿನ್ನೆಲೆಯಲ್ಲಿ ತಾಲೂಕಿನ ಇಂಗಳಿಗಿ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರು ಸಿದ್ದರಾಮಯ್ಯ ಭಾವಚಿತ್ರಕ್ಕೆ ಕ್ಷೀರಾಭಿಷೇಕ ಮಾಡಿದರು.
ಅದಕ್ಕೂ ಮುನ್ನ ಕಾಂಗ್ರೆಸ್ ಕಾರ್ಯಕರ್ತರು ಗ್ರಾಮದಲ್ಲಿ ಮೆರವಣಿಗೆ ನಡೆಸಿದರು. ಗ್ರಾಮದ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಸಿದ್ದರಾಮಯ್ಯ ಭಾವಚಿತ್ರಕ್ಕೆ ಕ್ಷೀರಾಭಿಷೇಕ ನಡೆಸಿ, ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು. ಸ್ಥಳೀಯ ಕಾಂಗ್ರೆಸ್ ಮುಖಂಡರಾದ ಎ.ಕೆ. ಉದೇದಪ್ಪ, ಮಾಳ್ಗಿ ಪಂಪಾಪತೆಪ್ಪ, ಎಂ. ಮಹಾದೇವಪ್ಪ, ಎಚ್.ಆರ್. ಹುಲುಗಪ್ಪ, ಶಾಂತಕುಮಾರ್, ಮಲ್ಲೇಶ್, ಎಂ. ನರಸಪ್ಪ, ವೆಂಕಟೇಶ್, ತುಕಾರಾಮ, ರಾಮಚಂದ್ರ, ಎ.ಕೆ. ಮಲಿಯಪ್ಪ ಇತರರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.