ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಬಸವ ಜಯಂತಿ

Mainashree
Updated On : 15 May 2013, 10:46 am

ಹಗರಿಬೊಮ್ಮನಹಳ್ಳಿ: ಇಲ್ಲಿನ ತಾಲೂಕು ಕಚೇರಿಯಲ್ಲಿ ಸೋಮವಾರ ಮುಂಜಾನೆ ವಿಶ್ವ ಮಾನವತಾವಾದಿ, ಕಾಯಕಯೋಗಿ ಬಸವಣ್ಣನವರ ಜಯಂತ್ಯುತ್ಸವವನ್ನು ಆಚರಿಸಲಾಯಿತು. ತಹಸೀಲ್ದಾರ್ ನಾಗರಾಜ ಭಟ್ ಅವರು ಬಸವಣ್ಣನವರ ಭಾವಚಿತ್ರಕ್ಕೆ ಪೂಜೆಸಲ್ಲಿಸಿ, ವಿಶ್ವಕ್ಕೆ ಜಾತ್ಯಾತೀತ ಪರಿಕಲ್ಪನೆಯನ್ನು ಸಾರುವ ಮೂಲಕ ವಿಶ್ವ ಮಾನವತಾವಾದಿಯಾಗಿ ಬಸವಣ್ಣನವರು ಗುರುತಿಸಿಕೊಂಡರು. ಅವರು ರೂಪಿಸಿರುವ ಮಾರ್ಗದಲ್ಲಿ ನಡೆಯುವ ಮೂಲಕ ಮತ್ತು ಅವರ ಧ್ಯೇಯ, ಉದ್ದೇಶಗಳನ್ನು ನಾವು ಪಾಲಿಸಿಕೊಂಡು ಬದುಕನ್ನು ಸಾರ್ಥಕಗೊಳಿಸಿಕೊಳ್ಳೋಣ ಎಂದರು. ವೀರಶೈವ ಮಹಾಸಭಾ ತಾಲೂಕಾಧ್ಯಕ್ಷ ಕೆ. ಶಂಕರಗೌಡ, ಕಾರ್ಯದರ್ಶಿ ಮುಧೋಳ ಶಿವರುದ್ರ, ಮುಖಂಡರಾದ ಕಿನ್ನಾಳ ಸುಭಾಷ, ತಾಪಂ ಇಓ ಜಿ. ಗೋಪ್ಯಾನಾಯ್ಕ, ಬಿಇಓ ಕೆ. ರಾಮನಗೌಡ, ಕ.ಲೋ.ಇ ಎಇಇ ಗುರುಬಸಪ್ಪ, ಎಇ ಪ್ರಭಾಕರ ಶೆಟ್ಟಿ, ತಾಲೂಕು ಸಮಾಜಕಲ್ಯಾಣಾಧಿಕಾರಿ ಮಾಣಿಕ್ಯಚಾರ್ ಸೇರಿದಂತೆ ಹಲವರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments