ಮಾಂಗಲ್ಯ ಅಪಹರಣ
ಹೊಸಪೇಟೆ: ಮಹಿಳೆಯ ಕೊರಳಲ್ಲಿದ್ದ ಮಾಂಗಲ್ಯ ಅಪಹರಿಸಿಕೊಂಡು ಹೋಗಿರುವ ಘಟನೆ ಇಲ್ಲಿನ ನೆಹರು ಕಾಲೋನಿಯ ನೀರಿನ ಟ್ಯಾಂಕ್ ಸಮೀಪ ಸೋಮವಾರ ನಡೆದಿದೆ. ಸ್ಥಳೀಯ ನಿವಾಸಿ ರುದ್ರಾಂಬಾ (60) ಅವರ ಕೊರಳಲ್ಲಿದ್ದ ಅಂದಾಜು 60 ಗ್ರಾಂ ತೂಕದ ರು. 1.50 ಲಕ್ಷ ಮೌಲ್ಯದ ಮಾಂಗಲ್ಯವನ್ನು ಬೈಕ್ನಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ಅಪಹರಿಸಿಕೊಂಡು ಹೋಗಿದ್ದಾರೆ. ದೇವರ ದರ್ಶನ ಪಡೆದುಕೊಂಡು ಮನೆಗೆ ಹೋಗುತ್ತಿರುವಾಗ ವಿಳಾಸ ಕೇಳುವ ನೆಪದಲ್ಲಿ ಬಂದ ವ್ಯಕ್ತಿಗಳು ಮಾಂಗಲ್ಯ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಈ ಕುರಿತು ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.