ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಚಿತ್ರಮಂದಿರಗಳ ಅವ್ಯವಸ್ಥೆ ಸರಿಪಡಿಸಲು ಆಗ್ರಹ

Vishwanath S
Updated On : 19 May 2013, 11:19 am

ಬಳ್ಳಾರಿ:  ನಗರದ ಚಲನಚಿತ್ರ ಮಂದಿರ (ಸಿನಿಮಾ ಥಿಯೇಟರ್ಸ್) ಗಳಲ್ಲಿರುವ ಅವ್ಯವಸ್ಥೆಯನ್ನು ಸರಿಪಡಿಸುವಂತೆ ಮಹರ್ಷಿ ವಾಲ್ಮೀಕಿ ಯುವ ಘರ್ಜನೆ ಸೇನೆ ಜಿಲ್ಲಾ ಘಟಕವು ಆಗ್ರಹಿಸಿದೆ. ಈ ಕುರಿತಂತೆ ಮಹರ್ಷಿ ವಾಲ್ಮೀಕಿ ಯುವ ಘರ್ಜನೆ ಸೇನೆ ಜಿಲ್ಲಾಧ್ಯಕ್ಷ ಎನ್. ಸತ್ಯನಾರಾಯಣ, ಪ್ರಧಾನ ಕಾರ್ಯದರ್ಶಿ ಎನ್. ನಾಗರಾಜ್ ಅವರು ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ನಗರದ ಚಲನಚಿತ್ರ ಮಂದಿರಗಳಲ್ಲಿ ಸರ್ಕಾರ ನಿಗದಿಪಡಿಸಿದ್ದಕ್ಕಿಂತಹೆಚ್ಚಿನ ದರ ವಸೂಲಿ ಮಾಡಲಾಗುತ್ತಿದೆ. ಒಂದೊಂದೊ ಚಿತ್ರಮಂದಿರದಲ್ಲಿ ಒಂದೊಂದು ರೀತಿಯಲ್ಲಿ ವಾಹನ ನಿಲುಗಡೆ ಶುಲ್ಕವನ್ನು ವಸೂಲಿ ಮಾಡಲಾಗುತ್ತಿದೆ. ಹಾಗೆ ಚಲನಚಿತ್ರ ಮಂದಿರಗಳ ಮಾಲೀಕರು ಮತ್ತು ಸಿಬ್ಬಂದಿ ವರ್ಗದವರು ಸಿನಿಮಾ ನೋಡಲು ಬಂದ ಪ್ರೇಕ್ಷಕರೊಂದಿಗೆ ಅಸಭ್ಯವಾಗಿ, ಗೂಂಡಾಗಳ ರೀತಿಯಲ್ಲಿ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಇನ್ನು ಚಲನಚಿತ್ರ ಮಂದಿರಗಳಲ್ಲಿ ಮೂಲಭೂತ ಸೌಲಭ್ಯಗಳಾದ ಮೂತ್ರಾಲಯ ಹಾಗು ಶೌಚಾಲಯಗಳು ಸ್ವಚ್ಛತೆಯಿಂದ ಕೂಡಿರುವುದಿಲ್ಲ. ಹಾಗೆ ಚಲನಚಿತ್ರ ಮಂದಿರಗಳಲ್ಲಿರುವ ಕ್ಯಾಂಟೀನ್‌ನಲ್ಲಿಯೂ ದುಪ್ಪಟ್ಟು ಹಣವನ್ನು ವಸೂಲಿ ಮಾಡಲಾಗುತ್ತಿದೆ ಎಂದು ದೂರಿದ್ದಾರೆ. ಈ ಹಿನ್ನೆಲೆಯಲ್ಲಿ ನಗರದಲ್ಲಿನ ಚಲನಚಿತ್ರ ಮಂದಿರಗಳಲ್ಲಿರುವ ಎಲ್ಲಾ ಸಮಸ್ಯೆಗಳನ್ನು ಪರಿಶೀಲಿಸಿ, ಶೀಘ್ರವೇ ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು ಒತ್ತಾಯಿಸಿದ್ದಾರೆ.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement