ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಯೋಗದಿಂದ ರೋಗಮುಕ್ತ ಸಮಾಜ: ಭವರ್ಲಾಲ್ ಆರ್ಯ

Rashmi Kasaragodu
Updated On : 23 May 2013, 12:02 pm

ಕನ್ನಡಪ್ರಭ ವಾರ್ತೆ, ಹೊಸಪೇಟೆ, ಮೇ 22
ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಮುಂದಾಗಬೇಕು ಎಂದು ಉತ್ತರ ಕರ್ನಾಟಕದ ಪತಂಜಲಿ ಯೋಗ ಸಮಿತಿ ರಾಜ್ಯ ಪ್ರಭಾರಿ ಭವರ್ಲಾಲ್ ಆರ್ಯ ಹೇಳಿದರು.
ನಗರದ ಚಿತ್ತವಾಡ್ಗಿಯ ಕಲ್ಮಠೇಶ್ವರ ದೇವಸ್ಥಾನದಲ್ಲಿ ಸ್ಥಳೀಯ ಆರ್ಯ ವೈಶ್ಯ ಸಂಘ ಹಾಗೂ ಪತಂಜಲಿ ಯೋಗ ಸಮಿತಿ ಆಶ್ರಯದಲ್ಲಿ ನಡೆದ ಯೋಗ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಬಾಬಾ ರಾಮದೇವ್ ಗುರೂಜಿ ಮಾರ್ಗದರ್ಶನದಲ್ಲಿ ದೇಶಾದ್ಯಂತ ಯೋಗ ಶಿಬಿರಗಳ ಮೂಲಕ ಜನರಿಗೆ ಉತ್ತಮ ಆರೋಗ್ಯ ನೀಡಲಾಗುತ್ತಿದೆ. ಮನುಷ್ಯ ನಿತ್ಯ ಬೆಳಗ್ಗೆ ಕೆಲ ಸಮಯ ಯೋಗಕ್ಕೆ ಮೀಸಲಿಟ್ಟರೆ ಆರೋಗ್ಯಕರವಾಗಿ ಜೀವಿಸಲು ಸಾಧ್ಯ ಎಂದು ಅವರು ಹೇಳಿದರು.
ಯೋಗದಿಂದ ಮಾತ್ರ ರೋಗಮುಕ್ತ ಸಮಾಜ ನಿರ್ಮಾಣ ಸಾಧ್ಯ. ಪ್ರಸ್ತುತ ದಿನಮಾನಗಳಲ್ಲಿ ನಾವು ಸೇವಿಸುವ ಎಲ್ಲ ಆಹಾರ ವಿಷ ಮಿಶ್ರಿತವಾಗಿದ್ದು, ಇದರಿಂದ ಅನೇಕ ರೋಗಗಳು ಉಲ್ಬಣಗೊಳ್ಳುತ್ತವೆ. ಹಾಗಾಗಿ ಪ್ರತಿ ದಿನ ಯೋಗ ಅಭ್ಯಾಸ ಮಾಡುವುದರಿಂದ ಉತ್ತಮ ಆರೋಗ್ಯ ಪಡೆಯಲು ಸಾಧ್ಯ ಎಂದರು.
ರಾಜ್ಯ ಪ್ರಶಸ್ತಿ ಪುರಸ್ಕೃತ ಜವಳಿ ರುದ್ರಪ್ಪ ಮಾತನಾಡಿ, ಚಿತ್ತವಾಡ್ಗಿ ಗ್ರಾಮದಲ್ಲಿ ಯೋಗ ಶಿಬಿರ ಆಯೋಜಿಸಿರುವುದು ಶ್ಲಾಘನೀಯ. ಯೋಗ ಶಿಬಿರಗಳು ನಿರಂತರವಾಗಿ ನಡೆಯಬೇಕು. ಇದಕ್ಕೆ ಬೇಕಾದ ಎಲ್ಲ ಸಹಕಾರ ನೀಡುವುದಾಗಿ ಅವರು ಹೇಳಿದರು. ಪತ್ರಕರ್ತ ಕೆ. ಲಕ್ಷ್ಮಣ ಮಾತನಾಡಿದರು. ಮಹಿಳಾ ಪ್ರಭಾರಿ ದಾಕ್ಷಾಯಿಣಿ ಶಿವಕುಮಾರ್, ಮಲ್ಲಿಕಾರ್ಜುನ, ಅರ್ಜುನಪ್ಪ, ಹುಲುಗಪ್ಪ, ಸಂತೋಷ್ ಇತರರು ಉಪಸ್ಥಿತರಿದ್ದರು.
ಸುಬ್ರಮಣ್ಯ ಶೆಟ್ಟಿ ಸ್ವಾಗತಿಸಿ, ವಂದಿಸಿದರು. ಶಿಕ್ಷಕ ವೆಂಕಟೇಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement