ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ನಾಳೆ ವಿದ್ಯುತ್ ವ್ಯತ್ಯಯ

Vishwanath S
Updated On : 26 May 2013, 1:18 am

ಹೂವಿನಹಡಗಲಿ: ಹಾವೇರಿ ಜಿಲ್ಲೆಯ ಗುತ್ತಲ ವಿದ್ಯುತ್ ವಿತರಣಾ ಕೇಂದ್ರದಲ್ಲಿ 20 ಎಂವಿಎ ಹೊಸ ವಿದ್ಯುತ್ ಪರಿವರ್ತಕ ಸ್ಥಾಪಿಸುವ ಕಾಮಗಾರಿ ನಡೆದಿದ್ದು, ತಾಲೂಕಿನ ಮೈಲಾರ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಹಳ್ಳಿಗಳಿಗೆ ಮೇ 27 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆವರೆಗೆ ವಿದ್ಯುತ್ ಪೂರೈಕೆಯಾಗುವುದಿಲ್ಲ. ಆದ್ದರಿಂದ ಗ್ರಾಹಕರು ಸಹಕರಿಸಬೇಕೆಂದು ಹೂವಿನಹಡಗಲಿ ಜೆಸ್ಕಾಂ ಎಇಇ ಎಂ. ಮೋಟ್ಲಾನಾಯ್ಕ ಮನವಿ ಮಾಡಿದ್ದಾರೆ.

ಉಚಿತ ಕಂಪ್ಯೂಟರ್ ತರಬೇತಿಗೆ ಆಹ್ವಾನ
ಬಳ್ಳಾರಿ: ಬಳ್ಳಾರಿಯ ಸಿಂಡ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯು ನಿರುದ್ಯೋಗಿ ಯುವಕರಿಗಾಗಿ ಉಚಿತ ಕಂಪ್ಯೂಟರ್ ಹಾರ್ಡ್‌ವೇರ್ ತರಬೇತಿಗೆ ಅರ್ಜಿ ಆಹ್ವಾನಿಸಿದೆ. 18ರಿಂದ 45 ವಯೋವುತಿ ಒಳಗಿನ ಗ್ರಾಮೀಣ ನಿರುದ್ಯೋಗಿ ಯುವಕರಿಗಾಗಿ ತರಬೇತಿಯನ್ನು ಆಯೋಜಿಸಲಾಗಿದ್ದು, ಕೌಶಲ್ಯದ ಜೊತೆಗೆ ಉದ್ಯಮಶೀಲತೆ, ವ್ಯಕ್ತಿತ್ವ ವಿಕಸನಕ್ಕೆ ಸಂಬಂಧಿಸಿದ ಮಾಹಿತಿಯನ್ನು ನೀಡಲಾಗುವುದು.  ಈ ಕ್ಷೇತ್ರದಲ್ಲಿ ಪ್ರಾಥಮಿಕ ಜ್ಞಾನ ಹೊಂದಿದ ಅಭ್ಯರ್ಥಿಗಳು ತರಬೇತಿಯಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ. ಅರ್ಹ ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸ, ಸಂಪರ್ಕಕ್ಕೆ ದೂರವಾಣಿ ಸಂಖ್ಯೆ, ವಯಸ್ಸು, ವಿದ್ಯಾರ್ಹತೆ, ಮುಂತಾದ ಮಾಹಿತಿಯೊಂದಿಗೆ ಅರ್ಜಿಯನ್ನು ಬಿಳಿಯ ಹಾಳೆಯ ಮೇಲೆ ಬರೆದು ಇದೇ ಮೇ 30ರೊಳಗಾಗಿ ನಿರ್ದೇಶಕರು, ಸಿಂಡ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಡಿಐಸಿ ಕಾಂಪೌಂಡ್, ಹೊಸಪೇಟೆ ರಸ್ತೆ, ಬಳ್ಳಾರಿ ಈ ವಿಳಾಸಕ್ಕೆ ಕಳುಹಿಸಿಕೊಡಬಹುದಾಗಿದೆ. ಮಾಹಿತಿಗಾಗಿ ದೂ.ಸಂ- 08392-244117ಗೆ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ವಿಷ ಸೇವಿಸಿ ಯುವತಿ ಸಾವು
ಬಳ್ಳಾರಿ: ಹೊಟ್ಟೆ ನೋವಿನ ಬಾಧೆ ತಾಳಲಾರದೆ ಯುವತಿಯೋರ್ವಳು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿರುಗುಪ್ಪ ತಾಲೂಕಿನ ಬೈರಾಪುರ ಗ್ರಾಮದಲ್ಲಿ ನಡೆದಿದೆ. ಮೃತಳನ್ನು ಮಲ್ಲಮ್ಮ (20) ಎಂದು ಗುರುತಿಸಲಾಗಿದೆ. ಈಕೆಯು ಕೆಲ ದಿನಗಳಿಂದ ಹೊಟ್ಟೆನೋವಿನಿಂದ ಬಳಲುತ್ತಿದ್ದು, ಶುಕ್ರವಾರ ಮನೆಯಲ್ಲಿ ಯಾರು ಇಲ್ಲದ ವೇಳೆ ವಿಷ ಸೇವಿಸಿದ್ದಳು, ಕೂಡಲೇ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಮೃತಪಟ್ಟಿದ್ದಾಳೆ. ಈ ಕುರಿತು ಸಿರಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement