ಡಿಪ್ಲೊಮಾ ಕೋರ್ಸ್: ಅರ್ಜಿ ಆಹ್ವಾನ
ಬಳ್ಳಾರಿ: ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ 3 ವರ್ಷಗಳ ಡಿಪ್ಲೊಮಾ ಕೋರ್ಸ್ ಕಲಿಕೆಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸಾಮಾನ್ಯ ಅಭ್ಯರ್ಥಿಗಳು 2003ರ ಜುಲೈ 1ಕ್ಕೆ 15 ರಿಂದ 23ರ ವಯೋವುತಿ ಹಾಗೂ ಪರಿಶಿಷ್ಟ ಜಾತಿ ಮತ್ತು ವರ್ಗದ ಅಭ್ಯರ್ಥಿಗಳು 15 ರಿಂದ 23 ವರ್ಷ ವಯೋವುತಿಯಲ್ಲಿರಬೇಕು. ಆಸಕ್ತರು ಭರ್ತಿ ಮಾಡಿದ ಅರ್ಜಿಗಳನ್ನು ಪ್ರಾಚಾರ್ಯರು ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ ನರಸಾಪುರ, ಗದಗ-582102 ಇವರಿಗೆ ಜೂನ್ 10ರೊಳಗಾಗಿ ಸಲ್ಲಿಸಬೇಕು. ಆಯ್ಕೆಯಾದವರಿಗೆ ತಿಂಗಳ ಶಿಷ್ಯವೇತನ ನೀಡಲಾಗುವುದು.
ಅರ್ಜಿ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಉಪ ಸಹಾಯಕ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯಿತಿ, ಬಳ್ಳಾರಿ ಅಥವಾ ದೂ.ಸಂ-08392-242073, 218696, 080-22278223, 22271628ನ್ನು ಸಂಪರ್ಕಿಸಲು ಕೋರಲಾಗಿದೆ.