ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಇಂದಿನಿಂದ ಕಾರ್ಯಾಗಾರ

Lingaraj Badiger
Updated On : 29 May 2013, 11:52 am

ಬಳ್ಳಾರಿ:  ಬೆಂಗಳೂರಿನ ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ ಹಾಗೂ ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ಮೇ 29ರಿಂದ 31ರ ವರೆಗೆ ಮೂರು ದಿನಗಳ ಕಾಲ ಪರಿಸರ ಸಂರಕ್ಷಣೆ ಮತ್ತು ನಿರ್ವಹಣೆ ಕುರಿತು ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ನಗರದ ಜಿಪಂ ಸಭಾಂಗಣದಲ್ಲಿ ತರಬೇತಿ ನಡೆಯಲಿದ್ದು, ಮೇ 29ರಂದು ತಾಲೂಕು ಮಟ್ಟದ ಅಧಿಕಾರಿಗಳಿಗೆ ತರಬೇತಿ ನೀಡಲಾಗುವುದು. ಮೇ 30ರಂದು ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರಿಗೆ ತರಬೇತಿ ನೀಡಲಾಗುವುದು. ಮೇ 31ರಂದು ಸ್ತ್ರೀಶಕ್ತಿ ಸಂಘದ ಸದಸ್ಯರಿಗಾಗಿ ತರಬೇತಿ ನೀಡಲಾಗುವುದು ಎಂದು ತರಬೇತಿ ಮುಖ್ಯಸ್ಥ ಬಿ. ಬಸವರಾಜ ತಿಳಿಸಿದ್ದಾರೆ.
ನಾಳೆ ಉದ್ಯೋಗ ಮೇಳ
ಬಳ್ಳಾರಿ: ಮೇ 30ರಂದು ಬೆಳಗ್ಗೆ 9ರಿಂದ ಮಧ್ಯಾಹ್ನ 1 ಗಂಟೆವರೆಗೆ ಜಿಲ್ಲಾ ಮಟ್ಟದ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಮೇಳವು ನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನಡೆಯಲಿದ್ದು, ಐಟಿಐನಲ್ಲಿ ಡೀಸೆಲ್ ಮೆಕ್ಯಾನಿಕ್ ಹಾಗೂ  ಮೋಟರ್ ಮೆಕ್ಯಾನಿಕ್, ಡಿಎಇ ಯಾವುದೇ ಪದವಿ ಹೊಂದಿದವರು ಹಾಗೂ 2ರಿಂದ 6 ವರ್ಷಗಳ ಅನುಭವವುಳ್ಳವರು ಭಾಗವಹಿಸಲು ಅರ್ಹರು. ಹೆಚ್ಚಿನ ಮಾಹಿತಿಗಾಗಿ ಮೊ.ಸಂ 9844444958, 9036422052ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪಿ.ಎಸ್. ಹಟ್ಟೆಪ್ಪ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement