ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಕೂಡ್ಲಿಗಿ: 100ಕ್ಕೂ ಹೆಚ್ಚು ಜನರಿಗೆ ಜ್ವರ, ಬಾಲಕಿ ಸಾವು

Vishwanath S
Updated On : 30 May 2013, 10:15 am

ಕ.ಪ್ರ.ವಾರ್ತೆ ,   ಕೂಡ್ಲಿಗಿ ,   ಮೇ 30
ಕೂಡ್ಲಿಗಿ ಪಪಂ ವ್ಯಾಪ್ತಿಯ ಅಮರದೇವರಗುಡ್ಡ ಮತ್ತು ಪಕ್ಕದ ಲಂಬಾಣಿ ಹಟ್ಟಿಯಲ್ಲಿ ಹದಿನೈದು ದಿನಗಳಿಂದ 100ಕ್ಕೂ ಹೆಚ್ಚು ಜನರು ಜ್ವರದಿಂದ ಬಳಲುತ್ತಿದ್ದು, ಜ್ವರಪೀಡಿತ ಬಾಲಕಿಯೊಬ್ಬಳು ಮೃತಪಟ್ಟ ವಿಷಯ ತಡವಾಗಿ ಬೆಳಕಿಗೆ ಬಂದಿದೆ.
ಎರಡನೇ ತರಗತಿ ವಿದ್ಯಾರ್ಥಿನಿ ರಾಧಿಕಾ (7) ಹೊಸಪೇಟೆ ಖಾಸಗಿ ಆಸ್ಪತ್ರೆಯೊಂದರಲ್ಲಿ ಮೃತಪಟ್ಟಿದ್ದಾಳೆ.  ಹೀಗಾಗಿ ಗ್ರಾಮಗಳ ಜನತೆ ಭಯಗೊಂಡಿದ್ದಾರೆ. ರಾಜ್ಯದ ವಿವಿಧೆಡೆ ಡೆಂಘೀ ಪ್ರಕರಣಗಳು ಪತ್ತೆಯಾಗಿರುವುದರಿಂದ ಇಲ್ಲಿಯೂ ಡೆಂಘೀ ಇರಬಹುದೇ ಎಂಬ ಅನುಮಾನ ಕಾಡುತ್ತಿದೆ.
ಜ್ವರಪೀಡಿತರನ್ನು ಪರೀಕ್ಷಿಸಿದ ವೈದ್ಯರಿಂದ ಯಾವುದೇ ನಿಖರ ಮಾಹಿತಿ ಲಭ್ಯವಾಗಿಲ್ಲ. ಚಿಕಿತ್ಸೆಗಾಗಿ ರೋಗಿಗಳನ್ನು ಪಕ್ಕದ ಹೊಸಪೇಟೆ, ಬಳ್ಳಾರಿಗೆ ಕಳುಹಿಸಿಕೊಡಲಾಗುತ್ತಿದೆ. ಕೂಡ್ಲಿಗಿ ಸರ್ಕಾರಿ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ಇದ್ದು, ಗ್ರಾಮದ ವೆಂಕಟೇಶ್ ಮತ್ತು ರತ್ನಮ್ಮ ಎಂಬವರು ಮಾತ್ರ ಚಿಕಿತ್ಸೆ ಪಡೆದಿದ್ದಾರೆ. ಕೆಲವರು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಸ್ಥಳೀಯ ಪಪಂ ಅಧಿಕಾರಿಗಳು ಎಚ್ಚೆತ್ತು ಗ್ರಾಮದ ಎಲ್ಲ ಚರಂಡಿಗಳನ್ನು ಸ್ವಚ್ಛಗೊಳಿಸಿದ್ದಾರೆ.
ಈಗ ಸ್ವಲ್ಪಮಟ್ಟಿಗೆ ಜ್ವರ ಪೀಡಿತರ ಸಂಖ್ಯೆ ಕಡಿಮೆಯಾಗಿದ್ದು, ಇಲ್ಲಿಯವರೆಗೆ ಡೆಂಘೀ ಲಕ್ಷಣ ಕಂಡುಬಂದಿಲ್ಲ ಎಂದು ತಾಲೂಕು ವೈದ್ಯಾಧಿಕಾರಿ ಡಾ. ಗುರುಬಸಪ್ಪ ಸ್ಪಷ್ಟಪಡಿಸಿದ್ದಾರೆ. ಕೂಡ್ಲಿಗಿ ತಾಲೂಕಿನ ಕೆಲವು ಹಳ್ಳಿಗಳಲ್ಲಿ ವಾಂತಿ-ಭೇದಿ ಪ್ರಕರಣಗಳು ಕಂಡುಬಂದಿರುವ ಬೆನ್ನಲ್ಲೇ ಜ್ವರ ಕಾಣಿಸಿಕೊಳ್ಳುತ್ತಿರುವುದು ಜನರಲ್ಲಿ ಆತಂಕ ಮೂಡಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement