ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಟ್ರ್ಯಾಕ್ಟರ್ ಪಲ್ಟಿ: ಇಬ್ಬರು ಮಕ್ಕಳ ಸಾವು

Lingaraj Badiger
Updated On : 1 Jun 2013, 12:01 pm

ಹೊಸಪೇಟೆ: ಟ್ರ್ಯಾಕ್ಟರೊಂದು ಪಲ್ಟಿಯಾದ ಪರಿಣಾಮ ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದ್ದು, 7 ಜನರಿಗೆ ತೀವ್ರ ಸ್ವರೂಪದ ಗಾಯಗಳಾದ ಘಟನೆ ನಗರದಿಂದ ಕಂಪ್ಲಿಗೆ ಹೋಗುವ ಮಾರ್ಗ ಮಧ್ಯೆ ನಲ್ಲಾಪುರ ಗ್ರಾಮದ ಬಳಿ ಜರುಗಿದೆ. ಮೃತ ಮಕ್ಕಳನ್ನು ಹಗರಿಬೊಮ್ಮನಹಳ್ಳಿ ತಾಲೂಕಿನ ಕೆಂಚಟನಹಳ್ಳಿ ಗ್ರಾಮದ ಸೌಮ್ಯ (6) ಹಾಗೂ ವಿಕಾಸ (5) ಎಂದು ಗುರುತಿಸಲಾಗಿದೆ. ಹನುಮಂತಪ್ಪ(50), ಪರಶುರಾಮ (21), ದುರುಗಪ್ಪ (19) ಶಾಂತಿ (16) ಶಾರದಾ(18), ಕೆಂಚಮ್ಮ (55), ಮಹೇಶ್ (14) ಎಂಬುವವರಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ಒಟ್ಟು 29 ಜನರಿಗೆ ಗಾಯಗಳಾಗಿವೆ. ಹಗರಿಬೊಮ್ಮನಹಳ್ಳಿ ತಾಲೂಕಿನ ಕೆಂಚಟನಹಳ್ಳಿ ಗ್ರಾಮದ ಒಂದೇ ಕುಟುಂಬದ ಸದಸ್ಯರು ಟ್ರ್ಯಾಕ್ಟರ್‌ನಲ್ಲಿ ದರೋಜಿಗೆ ಮಗುವಿನ ನಾಮಕರಣಕ್ಕೆಂದು ತೆರಳಿ ವಾಪಾಸ್ ಬರುವಾಗ ಟ್ರ್ಯಾಕ್ಟರ್ ಎಂಜಿನ್ ಹಿಂದಿನ ಕೊಂಡಿ ಕಳಚಿ ಟ್ರ್ಯಾಕ್ಟರ್ ಟ್ರಾಲಿ ಪಲ್ಟಿಯಾದ ಪರಿಣಾಮ ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಹೊಸಪೇಟೆ ನಗರದ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಣ್ಣಪುಟ್ಟ ಗಾಯಗಳುಗಳಿಗೆ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ನಗರದ ನೂರು ಹಾಸಿಗೆ ಆಸ್ಪತ್ರೆಯಲ್ಲಿ ಗಾಯಾಳುಗಳು ಹಾಗೂ ಮಕ್ಕಳನ್ನು ಕಳೆದುಕೊಂಡ ಕುಟುಂಬದವರ ರೋದನ ಮುಗಿಲು ಮುಟ್ಟಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement