ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಸಮವಸ್ತ್ರ ವಿತರಣೆಯಲ್ಲಿ ಗೊಂದಲವಿಲ್ಲ: ಡಿಡಿಪಿಐ

Lingaraj Badiger
Updated On : 6 Nov 2013, 11:20 am

ಕೊಟ್ಟೂರು: ಕೂಡ್ಲಿಗಿ ತಾಲೂಕಿನ ಸರ್ಕಾರಿ ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳಿಗೆ ಸರ್ವಶಿಕ್ಷಣ ಅಭಿಯಾನದಡಿ ಸಮವಸ್ತ್ರ ನೀಡಿಕೆಯಲ್ಲಿ ಯಾವುದೇ ಗೊಂದಲವಿಲ್ಲ ಎಂದು ಡಿಡಿಪಿಐ ಟಿ. ನಾರಾಯಣಗೌಡ ಸ್ಪಷ್ಟಪಡಿಸಿದ್ದಾರೆ. ಆಯಾ ಶಾಲೆಗಳ ಎಸ್‌ಡಿಎಂಸಿಗಳೇ ವಿದ್ಯಾರ್ಥಿಗಳಿಗೆ ಬೇಕಾದ ಅಳತೆಯ ಬಟ್ಟೆಗಳನ್ನು ಖರೀದಿಸಿ, ಹೊಲಿಗೆ ಮಾಡಿಕೊಡುವ ಜವಾಬ್ದಾರಿ ತೆಗೆದುಕೊಳ್ಳಬೇಕೆಂದು ಈಗಾಗಲೇ ತಾವು ಸ್ಪಷ್ಟವಾಗಿ ಸೂಚಿಸಿ ಆದೇಶಿಸಲಾಗಿದೆ. ಖಾಸಗಿ ವ್ಯಕ್ತಿಗಳು ಬಟ್ಟೆಗಳನ್ನು ಶಾಲೆಗಳಿಗೆ ಸರಬರಾಜು ಮಾಡಿದ್ದರೆ ಅದಕ್ಕೆ ಖಂಡಿತ ಸಾರ್ವಜನಿಕ ಶಿಕ್ಷಣ ಇಲಾಖೆ ಜವಾಬ್ದಾರಿಯಾಗುವುದಿಲ್ಲ ಎಂದು ಜಿಲ್ಲಾ ಉಪನಿರ್ದೇಶಕರು ತಿಳಿಸಿದರು. ಮಂಗಳವಾರ 'ಕನ್ನಡಪ್ರಭ'ದೊಂದಿಗೆ ಮಾತನಾಡಿದ ಅವರು, ಖಾಸಗಿ ವ್ಯಕ್ತಿಗಳು ಸಮವಸ್ತ್ರಗಳನ್ನು ವಿತರಿಸಲೆಂದು ಬಟ್ಟೆಗಳ ಮೂಟೆಗಳನ್ನು ಶಾಲೆಗಳಿಗೆ ತಲುಪಿಸಿರುವ ವಿಚಾರ ತಮ್ಮ ಗಮನಕ್ಕೆ ಬಂದಿಲ್ಲ. ಕೂಡ್ಲಿಗಿ ತಾಲೂಕಿನ ಸಮವಸ್ತ್ರ ವಿತರಣೆಗೆ ಸಂಬಂಧಿಸಿದ ಸಭೆಯಲ್ಲಿ ಹಾಜರಿದ್ದ ಶಿಕ್ಷಕ ಸಮೂಹ, ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷರು ಪಾಲ್ಗೊಂಡಿದ್ದ ವೇಳೆ ತಾವು ಸ್ಪಷ್ಟವಾಗಿ ಎಸ್‌ಡಿಎಂಸಿ ಮೂಲಕವೇ ಸಮವಸ್ತ್ರ ಖರೀದಿಸುವಂತೆ ತಾಕೀತು ಮಾಡಿರುವೆ ಎಂದು ಹೇಳಿದರು.
ಇಂದು ಪ್ರಗತಿ ಪರಿಶೀಲನೆ ಸಭೆ
ಹೊಸಪೇಟೆ: ತಾಲೂಕು ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ನಗರದ ಅಮರಾವತಿ ಅತಿಥಿಗೃಹದಲ್ಲಿ ನ. 6ರಂದು ಬೆಳಗ್ಗೆ 11.30ಕ್ಕೆ ನಡೆಯಲಿದೆ. ಕಾರ್ಮಿಕ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪಿ.ಟಿ. ಪರಮೇಶ್ವರ ನಾಯ್ಕ ಸಭೆಯ ಅಧ್ಯಕ್ಷತೆ ವಹಿಸುವರು. ತಾಲೂಕು ಮಟ್ಟದ ಎಲ್ಲ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಬೇಕು. ಇಲಾಖೆಯ ಪ್ರತಿನಿಧಿಗಳನ್ನು ಸಭೆಗೆ ಕಳುಹಿಸದೇ ಜವಾಬ್ದಾರಿಯುತ ಅಧಿಕಾರಿಗಳು ಖುದ್ದಾಗಿ ಸಭೆಯಲ್ಲಿ ಭಾಗವಹಿಸಬೇಕು ಎಂದು ತಹಸೀಲ್ದಾರ್ ರಮೇಶ್ ಕೋನರೆಡ್ಡಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement