ಕರ್ನಾಟಕ ಏಕೀಕರಣಕ್ಕೆ ಬಳ್ಳಾರಿ ಕೊಡುಗೆ ಅಪಾರ
ಕನ್ನಡಪ್ರಭ ವಾರ್ತೆ, ಬಳ್ಳಾರಿ, ನ. 9
ಕರ್ನಾಟಕ ಏಕೀಕರಣಕ್ಕೆ ಬಳ್ಳಾರಿ ಜಿಲ್ಲೆ ಕೊಡುಗೆ ಅಪಾರ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ತಿಳಿಸಿದರು.
ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಸಿರಿಗೇರಿ ಗ್ರಾಮದಲ್ಲಿ ಶನಿವಾರ 'ಕರ್ನಾಟಕ ಏಕೀಕರಣಕ್ಕೆ ಬಳ್ಳಾರಿ ಜಿಲ್ಲೆ ಕೊಡುಗೆ' ಎಂಬ ವಿಷಯ ಕುರಿತು ಏರ್ಪಡಿಸಿದ್ದ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.
ಕನ್ನಡ ಭಾಷೆ, ನೆಲ, ಜಲ ಸಂರಕ್ಷಣೆಗೆ ಪರಿಷತ್ತು ಮತ್ತು ಪ್ರಾಧಿಕಾರಗಳು ಬದ್ಧವಾಗಿದ್ದು, ಈ ನಿಟ್ಟಿನಲ್ಲಿ ಎರಡು ಸಂಸ್ಥೆಗಳು ಕಾರ್ಯೋನ್ಮುಖವಾಗಿವೆ ಎಂದು ತಿಳಿಸಿದರು. ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಸಿರಿಗೇರಿ ಯರಿಸ್ವಾಮಿ ಅಧ್ಯಕ್ಷತೆ ವಹಿಸಿದ್ದರು.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ. ಕೆ. ಮುರುಳೀಧರ, ಸಿ.ಎಂ. ಚನ್ನಬಸಯ್ಯ, ಎಸ್.ಎಂ. ನಾಗರಾಜಸ್ವಾಮಿ, ಎನ್.ಪಂಪಾಪತಿ, ಟಿ.ಎಚ್. ಸುಭಾನಿ, ಡಿ. ನಾಗರಾಜ, ಪ್ರಸಾದರೆಡ್ಡಿ, ಬಿ.ಅಮರಗೌಡ, ಈರಯ್ಯ, ಅಡಿವೆಯ್ಯಸ್ವಾಮಿ, ಸಿ.ಎಂ. ನಾಗರಾಜಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.