ಬರ್ಚಿ ಎಸೆತ: ದಾಖಲೆ ಬರೆದ ಸುವೇರಾ
ಹಗರಿಬೊಮ್ಮನಹಳ್ಳಿ: ಹೊಸಪೇಟೆ ನಗರದಲ್ಲಿ ಗುರುವಾರ ಮುಕ್ತಾಯಗೊಂಡ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ 5ನೇ ಅಂತರ್ ಮಹಾವಿದ್ಯಾಲಯ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಹಗರಿಬೊಮ್ಮನಹಳ್ಳಿ ಪಟ್ಟಣದ ರಾಮನಗರದ ಜಿವಿಪಿಪಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಕೆ. ಸುವೇರಾ ಮಹಿಳೆಯರ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ದಾಖಲೆಯೊಂದಿಗೆ ಪ್ರಥಮ ಸ್ಥಾನ ಗಳಿಸಿದ್ದಾರೆ.
ಜತೆಗೆ ಗುಂಡು ಹಾಗೂ ಚಕ್ರ ಎಸೆತಗಳಲ್ಲಿ ದ್ವೀತಿಯ ಸ್ಥಾನ ಗಳಿಸುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾಳೆ ಎಂದು ಕಾಲೇಜಿನ ಪ್ರಾಚಾರ್ಯ ಜಿ. ಮಲ್ಲಿಕಾರ್ಜುನ ಹೇಳಿದರು.
ಕಾಲೇಜಿನ ವಿದ್ಯಾರ್ಥಿ ಇಮಾಮ್ ಅಲಿ ಖಾಸಿಮ್ ಪುರುಷರ 100 ಮೀ. ಓಟದಲ್ಲಿ ದ್ವಿತೀಯ ಹಾಗೂ 400 ರೀಲೆಯಲ್ಲಿ ಕಾಲೇಜಿನ ಮಹಿಳೆಯರ ತಂಡ ದ್ವಿತೀಯ ಹಾಗೂ ಪುರುಷರ ತಂಡ ನಾಲ್ಕನೇ ಸ್ಥಾನ ಗಳಿಸಿ ಹೆಸರು ತಂದಿದ್ದಾರೆ ಎಂದು ತಿಳಿಸಿದರು.
ಅಭಿನಂದನೆ: ವಿವಿಧ ಕ್ರೀಡಾಕೂಟದಲ್ಲಿ ಕಾಲೇಜಿಗೆ ಕೀರ್ತಿ ತಂದಿರುವ ಕ್ರೀಡಾಪಟುಗಳನ್ನು ಶುಕ್ರವಾರ ಕಾಲೇಜಿನ ಅವರಣದಲ್ಲಿ ಅಭಿನಂದಿಸಲಾಯಿತು. ಕಾಲೇಜಿನ ಕ್ರೀಡಾ ವ್ಯವಸ್ಥಾಪಕ ಡಾ. ಎಚ್. ಬುಳ್ಳಪ್ಪ, ಬಿ. ಮಾರುತೇಶ, ಗ್ರಂಥಾಪಾಲಕ ಟಿ. ರಾಮಲಿಂಗಪ್ಪ, ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಈ ಸಂದರ್ಭದಲ್ಲಿದ್ದರು.