ಕರವೇಯಿಂದ ಇಂದು ರಾಜ್ಯೋತ್ಸವ
ಕೊಟ್ಟೂರು: ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ ಶೆಟ್ಟಿ ಬಳಗದ ಕೊಟ್ಟೂರು ಘಟಕದಿಂದ 58ನೇ ಕರ್ನಾಟಕ ರಾಜ್ಯೋತ್ಸವವನ್ನು ನ. 12ರಂದು ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದೆ. ಭುವನೇಶ್ವರಿ ದೇವಿಯ ಭವ್ಯ ಮೆರವಣಿಗೆ ಬೆ. 10ರಿಂದ ಶ್ರೀ ಗುರುಕೊಟ್ಟೂರೇಶ್ವರ ಸ್ವಾಮಿ ದೇವಸ್ಥಾನದಿಂದ ಆರಂಭಗೊಳ್ಳಲಿದೆ. ಸರ್ಕಾರಿ ಬಾಲಕರ ಪ್ರೌಢಶಾಲೆ ಮೈದಾನದಲ್ಲಿ ಮೆರವಣಿಗೆ ಅಂತ್ಯಗೊಳ್ಳಲಿದೆ ಎಂದು ಕರವೇ ಘಟಕದ ಗೌರವ ಅಧ್ಯಕ್ಷ ಐ. ದಾರುಕೇಶ ಅಧ್ಯಕ್ಷ ಕೆ. ಶಿವಕುಮಾರ್ ಗೌಡ ತಿಳಿಸಿದರು. ರಾಜ್ಯೋತ್ಸವದ ಸಮಾರಂಭ ಸಂಜೆ 4-30ಕ್ಕೆ ಇಲ್ಲಿನ ಸರ್ಕಾರಿ ಬಾಲಕರ ಪ್ರೌಢಶಾಲೆಯ ಮೈದಾನದಲ್ಲಿ ನಡೆಯಲಿದೆ. ಶಾಸಕ ಎಸ್. ಭೀಮಾನಾಯ್ಕ ಅಧ್ಯಕ್ಷತೆ ವಹಿಸುವರು. ಕರವೇ ರಾಜ್ಯ ಕಾರ್ಯಾಧ್ಯಕ್ಷ ಪ್ರವೀಣಕುಮಾರ್ ಶೆಟ್ಟಿ ರಾಜ್ಯಾಧ್ಯಕ್ಷ ಎಚ್. ಶಿವರಾಮೇಗೌಡ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಹರಪನಹಳ್ಳಿ ಶಾಸಕ ಎಂ.ಪಿ. ರವೀಂದ್ರ ಪಾಲ್ಗೊಳ್ಳಲಿದ್ದು, ಎಂಎಂಜೆ ಹರ್ಷವರ್ಧನ್ ಗೌರವ ವಂದನೆ ಸ್ವೀಕರಿಸಲಿದ್ದಾರೆ. ಸಾಹಿತಿ ಕುಂ. ವೀರಭದ್ರಪ್ಪ ಅವರನ್ನು ಸನ್ಮಾನಿಸಲಾಗುವುದು. ಉಪನ್ಯಾಸಕ ಕೆ. ವಾಸುದೇವ ಭಟ್ ಭಾಷಣ ಮಾಡಲಿದ್ದಾರೆ. ಕರವೇ ಮಧ್ಯ ಕರ್ನಾಟಕ ಅಧ್ಯಕ್ಷ ಕೆ.ಜಿ. ಯಲ್ಲಪ್ಪ, ಜಿಲ್ಲಾಧ್ಯಕ್ಷ ಹದ್ದಿಗೇರಿ ರಾಮಣ್ಣ ಪ್ರಮಾಣ ವಚನ ಬೋಧಿಸಲಿದ್ದಾರೆ ಎಂದು ತಿಳಿಸಿದರು.