ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಇಂದು, ನಾಳೆ ನೀರು ಪೂರೈಕೆ ವ್ಯತ್ಯಯ

Lingaraj Badiger
Updated On : 13 Nov 2013, 10:40 am

ಬಳ್ಳಾರಿ: ನಗರದ ಅಲ್ಲೀಪುರ ಕೇಂದ್ರ ಸ್ಥಾವರದಿಂದ ಮದರ್ ಟ್ಯಾಂಕಿಗೆ ನೀರು ಸರಬರಾಜು ಮಾಡುವ 270 ಎಚ್.ಪಿ. ಪಂಪ್‌ಸೆಟ್ ಮತ್ತು ಮ್ಯಾನಿ  ಪೋಲ್ಡ್ ಸಂಪರ್ಕ ಕಲ್ಪಿಸುವ ಕಾಮಗಾರಿ ಕೈಗೊಳ್ಳಬೇಕಾಗಿರುವುದರಿಂದ ನ. 13 ಹಾಗೂ 14ರಂದು ನಗರಕ್ಕೆ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಜಲಮಂಡಳಿ ಮತ್ತು ಮಹಾನಗರ ಪಾಲಿಕೆಯೊಂದಿಗೆ ಸಹಕರಿಸಬೇಕೆಂದು ಪಾಲಿಕೆ ಆಯುಕ್ತ ಚಿಕ್ಕಣ್ಣ ಪ್ರಕಟಣೆಯ ಮೂಲಕ ಮನವಿ ಮಾಡಿದ್ದಾರೆ.
ಪಿಂಜಾರ ಸಂಘದ ಪದಾಧಿಕಾರಿಗಳ ಆಯ್ಕೆ
ಬಳ್ಳಾರಿ: ಕರ್ನಾಟಕ ರಾಜ್ಯ ನದಾಫ್, ಪಿಂಜಾರ್ ಸಂಘದ ಜಿಲ್ಲಾಧ್ಯಕ್ಷರಾಗಿ ಪಿ. ಶೇಕ್‌ಸಾಬ್ ಆಯ್ಕೆಯಾಗಿದ್ದಾರೆ. ವಿಶಾಲ ನಗರದಲ್ಲಿ ಈಚೆಗೆ ನಡೆದ ಸಂಘದ ಚುನಾವಣೆಯಲ್ಲಿ ಸದಸ್ಯರು ಅವರನ್ನು ಒಮ್ಮತದಿಂದ ಆಯ್ಕೆ ಮಾಡಿದ್ದು, ಇತರೆ ಸದಸ್ಯರ ವಿವರ ಇಂತಿದೆ. ಉಪಾಧ್ಯಕ್ಷರಾಗಿ ಮುನೀರ್ ಬಾಷಾ, ಪ್ರಧಾನ ಕಾರ್ಯದರ್ಶಿಯಾಗಿ ಹಾಜಿ ಅಬ್ದುಲ್ ಶುಕೂರ್, ಖಜಾಂಚಿಯಾಗಿ ಪಿ. ಖಾಸಿಂಸಾಬ್, ಜಂಟಿ ಕಾರ್ಯದರ್ಶಿಯಾಗಿ ಕೋಳೂರು ಷೇಕ್ಷಾವಲಿ, ಸಹ ಕಾರ್ಯದರ್ಶಿಯಾಗಿ ಮೌಲಾಲಿ, ಸದಸ್ಯರಾಗಿ ನಜೀರ್ ಪಾಷಾ, ನಭಿಸಾಬ್, ಪಿ. ರಸೂಲ್‌ಸಾಬ್, ಅಲ್ಲಾಭಕ್ಷಿ, ಷಾಷಾಬು, ಇಬ್ರಾಹಿಂ ಸಾಬ್ ಇತರರು ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾಧ್ಯಕ್ಷ ಶೇಕ್‌ಸಾಬ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಾಳೆ ಮಜ್ದೂರ್ ಸಂಘದಿಂದ ಪ್ರತಿಭಟನೆ
ಬಳ್ಳಾರಿ: ಇಲ್ಲಿನ ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಘಟಕ- 1ರಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಭ್ರಷ್ಟ ಅಧಿಕಾರಿ ವಿರುದ್ಧ ಮೇಲಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕರ್ನಾಟಕ ರಸ್ತೆ ಸಾರಿಗೆ ಮಜ್ದೂರ್ ಸಂಘದಿಂದ ನ. 14ರಂದು ಘಟಕದ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈಗಾಗಲೆ ಈ ವಿಚಾರದ ಕುರಿಗಾಗಿ ಅ. 30ರಂದು ಮೇಲಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಕ್ರಮ ಕೈಗೊಳ್ಳುವಲ್ಲಿ ಯಾರೂ ಮುಂದಾಗಿಲ್ಲ. ಹೀಗಾಗಿ ನ. 14ರಂದು ಹಮ್ಮಿಕೊಳ್ಳುವ ಪ್ರತಿಭಟನೆಯಲ್ಲಿ ಸಂಘದ ಎಲ್ಲ ಸದಸ್ಯರು ಭಾಗವಹಿಸಬೇಕೆಂದು ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಕೆ. ವಿಜಯಕುಮಾರ್ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement