ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಮಾನವ ಹಕ್ಕುಗಳ ಸಮರ್ಪಕ ಅನುಷ್ಠಾನ ಅಗತ್ಯ

Lingaraj Badiger
Updated On : 13 Nov 2013, 10:39 am

ಕನ್ನಡಪ್ರಭ ವಾರ್ತೆ, ಹೊಸಪೇಟೆ, ನ. 12
ಮಾನವ ಹಕ್ಕುಗಳು ಪ್ರತಿ ಮನುಷ್ಯನ ಪ್ರಾಥಮಿಕ ಹಕ್ಕುಗಳಾಗಿದ್ದು, ಭಾರತದಲ್ಲಿ ಮಾನವ ಹಕ್ಕುಗಳಿಗೆ ಪ್ರಾಧಾನ್ಯ ನೀಡಲಾಗಿದೆ. ಮಾನವ ಹಕ್ಕಗಳು ಸಮರ್ಪಕವಾಗಿ ಅನುಷ್ಠಾನಕ್ಕೆ ಬರಬೇಕಾಗಿದೆ ಎಂದು ಇಲ್ಲಿನ 3ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶಿವಣ್ಣ ಹೇಳಿದರು.
ನಗರದ ಕೋರ್ಟ್ ಆವರಣದಲ್ಲಿ ಅಖಿಲ ಭಾರತ ಮಾನವ ಹಕ್ಕುಗಳ ಸಂಘ ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಮತ್ತು ವಕೀಲರ ಸಂಘದ ಆಶ್ರಯದಲ್ಲಿ ಸೋಮವಾರ ನಡೆದ ರಾಷ್ಟ್ರೀಯ ಕಾನೂನು ಸೇವಾ ದಿನಾಚರಣೆ ಹಾಗೂ ಅಖಿಲ ಭಾರತ ಮಾನವ ಹಕ್ಕುಗಳ ಸಂಘದ ಹೊಸಪೇಟೆ ಶಾಖೆ ಉದ್ಘಾಟಿಸಿ ಮಾತನಾಡಿದರು. ಮಾನವನಾಗಿ ಹುಟ್ಟಿದ ಮೇಲೆ ಪ್ರತಿಯೊಬ್ಬರಿಗೂ ಕೆಲವು ಹಕ್ಕುಗಳು ಸಹಜವಾಗಿ ದೊರೆಯುವಂತೆ ನಮ್ಮ ಸಂವಿಧಾನವನ್ನು ರೂಪಿಸಲಾಗಿದೆ. ಆದರೆ, ನಮ್ಮ ಹಕ್ಕುಗಳನ್ನು ಪಡೆಯಲು ಹೋರಾಟ ಮಾಡಬೇಕಾದ ಸಂದರ್ಭಗಳು ಉಂಟಾಗುತ್ತಿವೆ. ಪ್ರತಿಯೊಬ್ಬರೂ ಒಟ್ಟಾಗಿ ನಮ್ಮ ಹಕ್ಕುಗಳಿಗಾಗಿ ಹೋರಾಡದಿದ್ದರೆ ಮಾನವ ಹಕ್ಕುಗಳ ಉಲ್ಲಂಘನೆ ಆಗುತ್ತಲೇ ಇರುತ್ತದೆ. ಅವುಗಳನ್ನು ಸರಿಯಾಗಿ ಅರ್ಥೈಯಿಸಿಕೊಂಡು ಸಮರ್ಪಕ ಅನುಷ್ಠಾನಕ್ಕೆ ತರಲು ಶಕ್ತಿಮೀರಿ ಪ್ರಯತ್ನಿಸಬೇಕಾಗಿದೆ ಎಂದು ಹೇಳಿದರು.
ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ಮಾರುತಿ ಎಸ್. ಬಾಗಡೆ ಮಾತನಾಡಿ, ಪ್ರತಿಯೊಬ್ಬರಿಗೂ ಸಹಜವಾಗಿ ದೊರೆಯುವ 30 ಪ್ರಮುಖ ಹಕ್ಕುಗಳನ್ನು ಸಂವಿಧಾನದಲ್ಲಿ ಪ್ರಸ್ತಾಪಿಸಲಾಗಿದೆ. ಪ್ರತಿಯೊಬ್ಬರೂ ಮಾನವ ಹಕ್ಕುಗಳನ್ನು ಸದ್ವಿನಿಯೋಗಪಡಿಸಿಕೊಳ್ಳಬೇಕಾಗಿದೆ. ಮಾನವ ಹಕ್ಕಗಳನ್ನು ಪಡೆದುಕೊಳ್ಳಲು ಹೋರಾಟ ಅಗತ್ಯವಾಗಿದೆ ಎಂದು ಹೇಳಿದರು.
ಜೆಎಂಎಫ್‌ಸಿ ಅಪರ ಹಿರಿಯ ಸಿವಿಲ್ ನ್ಯಾಯಾಧೀಶ ಕೆ. ನಾರಾಯಣ ಪ್ರಸಾದ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಜನರಲ್ಲಿ ಸ್ಪಲ್ಪಮಟ್ಟಿಗೆ ಮಾನವ ಹಕ್ಕಗಳ ಬಗ್ಗೆ ಜಾಗೃತಿ ಮೂಡುತ್ತಿರುವುದು ಸಂತಸದ ಸಂಗತಿ ಎಂದರು.
ಅಖಲ ಭಾರತ ಮಾನವ ಹಕ್ಕಗಳ ಸಂಘದ ರಾಜ್ಯಾಧ್ಯಕ್ಷ ಪಿ. ಮೋಹನ್ ಬಾಬು ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜೆಎಂಎಫ್‌ಸಿ ಅಪರ ಸಿವಿಲ್ ನ್ಯಾಯಾಧೀಶ ಎ. ಈರಣ್ಣ, ವಕೀಲರ ಸಂಘದ ಅಧ್ಯಕ್ಷ ಕೆ. ರತ್ನಾಕರ್ ರಾವ್, ವಕೀಲರ ಸಂಘದ ಕಾರ್ಯದರ್ಶಿ ಕೆ. ಹಿರೇಮಠ್, ಸಮಾಜ ಸೇವಕಿ ರಾಣಿ ಸಂಯುಕ್ತ, ಅಖಿಲ ಭಾರತ ಮಾನವ ಹಕ್ಕಗಳ ಸಂಘದ ರಾಜ್ಯ ಮುಖ್ಯ ಕಾರ್ಯದರ್ಶಿ ಕೆ. ಮಂಜುಳಾ ಮತ್ತಿತರರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement