ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ವಿಜೃಂಭಣೆಯ ಕನಕ ಜಯಂತಿ: ನಿರ್ಧಾರ

Lingaraj Badiger
Updated On : 13 Nov 2013, 10:39 am

ಬಳ್ಳಾರಿ: ಬಳ್ಳಾರಿಯಲ್ಲಿ ನವೆಂಬರ್ 20ರಂದು ಕನಕ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಅಮ್ಲಾನ್ ಆದಿತ್ಯ ಬಿಸ್ವಾಸ್ ತಿಳಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಈಚೆಗೆ ನಡೆದ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಯಂತಿಯಂದು ಬೆಳಗ್ಗೆ 10ಕ್ಕೆ ನಗರದ ಅಗ್ನಿಶಾಮಕ ಠಾಣೆ ಎದುರಿನ ಕನಕ ವೃತ್ತದಲ್ಲಿರುವ ದಾಸಶ್ರೇಷ್ಠ ಶ್ರೀ ಕನಕದಾಸರ ಪುತ್ಥಳಿಗೆ ಕಾರ್ಮಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪಿ.ಟಿ. ಪರಮೇಶ್ವರ ನಾಯ್ಕ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಲಿದ್ದಾರೆ. ಅನಂತರ ವಿವಿಧ ಜಾನಪದ ಕಲಾತಂಡಗಳೊಂದಿಗೆ ಸ್ತಬ್ಧಚಿತ್ರ ಮೆರವಣಿಗೆ ನಡೆಸಲಾಗುವುದು ಎಂದು ತಿಳಿಸಿದರು. ಅನಂತರ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ  ಬೆಳಗ್ಗೆ 11.30ಕ್ಕೆ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಪರಮೇಶ್ವರ ನಾಯ್ಕ್, ಕನಕದಾಸರ ಭಾವಚಿತ್ರಕ್ಕೆ ಪೂಜೆ ಹಾಗೂ ಮಾಲಾರ್ಪಣೆ ಸಲ್ಲಿಸಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಜಯಂತಿ ಅಂಗವಾಗಿ ವಿಶೇಷ ಉಪನ್ಯಾಸ ಹಾಗೂ ಕನಕದಾಸ ಕೀರ್ತನೆಗಳ ಗಾಯನ ಕಾರ್ಯಕ್ರಮ ನಡೆಸಲಾಗುವುದು ಎಂದರು. ಮಹಾನಗರ ಪಾಲಿಕೆ ವತಿಯಿಂದ ನಗರದ ಕನಕವೃತ್ತವನ್ನು ಸೌಂದರ್ಯೀಕರಣಗೊಳಿಸಲಾಗುವುದು. ಅಲ್ಲದೆ, ಗ್ರಾನೈಟ್ ಕಲ್ಲಿನಲ್ಲಿ ಶ್ರೀ ಕನಕದಾಸರ ಜೀವನ ಚರಿತ್ರೆ, ಕೀರ್ತನೆಗಳನ್ನು ಕೆತ್ತನೆ ಮಾಡಿಸಲಾಗುವುದು ಎಂದರು. ಅಪರ ಜಿಲ್ಲಾಧಿಕಾರಿ ವೆಂಕಟೇಶ್, ಸಹಾಯಕ ಆಯುಕ್ತ ಅನಿರುದ್ಧ್ ಶ್ರವಣ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾ ಸಹಾಯಕ ನಿರ್ದೇಶಕ ನಾಗರಾಜ್, ಕುರುಬ ಸಮಾಜದ ಸಂಘಟನೆಗಳ ಪದಾಧಿಕಾರಿಗಳು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement