ಪ್ರತಿಯೊಬ್ಬರೂ ಆರೋಗ್ಯ ಕಾಪಾಡಿಕೊಳ್ಳಿ
ಹೊಸಪೇಟೆ: ಪ್ರತಿಯೊಬ್ಬರೂ ಆರೋಗ್ಯ ಕಾಪಾಡಿಕೊಳ್ಳುವ ಮೂಲಕ ಆರೋಗ್ಯಕರ ಸಮಾಜ ನಿರ್ಮಿಸಲು ಮುಂದಾಗಬೇಕು ಎಂದು ರೋಟರಿ ಕ್ಲಬ್ ಅಧ್ಯಕ್ಷ ಎಚ್. ಶ್ರೀನಿವಾಸ್ ರಾವ್ ಹೇಳಿದರು.
ನಗರದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು, ರೋಟರಿ ಕ್ಲಬ್ ಹಾಗೂ ಇನ್ನರ್ವ್ಹೀಲ್ ಕ್ಲಬ್ ಮತ್ತು ಆಯುಷ್ ಇಲಾಖೆಯ ಸರ್ಕಾರಿ ಆಯುರ್ವೇದ ಆಸ್ಪತ್ರೆ ಆಶ್ರಯದಲ್ಲಿ ಇಲ್ಲಿನ ಸರ್ಕಾರಿ ನೌಕರರ ಭವನದಲ್ಲಿ ಮಂಗಳವಾರ ನಡೆದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ರೋಟರಿ ಕ್ಲಬ್ ಕಾರ್ಯದರ್ಶಿ ಕೆ. ಸೈಯದ್ ಮಹಮದ್, ಇನ್ನರ್ವ್ಹೀಲ್ ಅಧ್ಯಕ್ಷೆ ಡಾ. ಮಾಧವಿದೇವಿ, ಕಾರ್ಯದರ್ಶಿ ಮೇಘನಾ, ಎನ್ನೆಸ್ಸೆಸ್ ಶಿಬಿರದ ಅಧಿಕಾರಿ ಟಿ. ಮಂಜುನಾಥ ಸ್ವಾಮಿ ಇತರರು ವೇದಿಕೆಯಲ್ಲಿದ್ದರು.
ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ವೈದ್ಯಾಧಿಕಾರಿಗಳಾದ ಡಾ. ಪಿ. ಮುನಿವಾಸುದೇವರೆಡ್ಡಿ, ಡಾ. ರೂಪ್ ಸಿಂಗ್ ರಾಠೋಡ್, ಡಾ. ಆರ್.ಪಿ. ಹಿರೇಮಠ್, ಸುವರ್ಣ, ಚಂದಾಸಾಬ್ ಇತರರು ಶಿಬಿರದಲ್ಲಿ ರೋಗಿಗಳ ತಪಾಸಣೆ ನಡೆಸಿದರು. ಶಿಬಿರದಲ್ಲಿ ಭಾಗವಹಿಸಿದ್ದ 400ಕ್ಕೂ ಹೆಚ್ಚು ಜನರ ಆರೋಗ್ಯ ತಪಾಸಣೆ ನಡೆಸಿ ಔಷಧಿ ವಿತರಿಸಿದರು.