ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಕ್ರೀಡೆಯಿಂದ ಉತ್ತಮ ಬಾಂಧವ್ಯ

Mainashree
Updated On : 25 Nov 2013, 10:52 am

ಬಳ್ಳಾರಿ: ಕ್ರೀಡೆಗಳು ಉತ್ತಮ ಬಾಂಧವ್ಯಗಳನ್ನು ಬೆಳೆಸುವ ಜತೆಗೆ ಸ್ನೇಹ, ಶಾಂತಿ, ಸೌಹಾರ್ದತೆಗಳನ್ನು ವೃದ್ಧಿಸುತ್ತವೆ ಎಂದು ತಹಸೀಲ್ದಾರ್ ಶರಣಪ್ಪ ಹೇಳಿದರು.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ರಾಜ್ಯ ಮಟ್ಟದ ಗ್ರಾಮೀಣ (ಪೈಕಾ) ಗುಂಪು- 3 ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿ, ಕ್ರೀಡೆಗಳು ಜಾತಿ, ಮತಗಳನ್ನು ಹೊಡೆದೋಡಿಸಿ ಕ್ರೀಡಾ ಮನೋಭಾವನೆ ಬೆಳಸುತ್ತವೆ. ಇಲ್ಲಿ ಸೋಲು, ಗೆಲುವು ಮುಖ್ಯವಲ್ಲ. ಕ್ರೀಡಾ ಮನೋಭಾವಮುಖ್ಯ ಎಂದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕ ಎಂ.ಸಿ. ರಮೇಶ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಕ್ರೀಡೆಗಳು ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗೆ ಸಹಕಾರಿ. ಸದೃಢ ಸಮಾಜಕ್ಕೆ ಸದೃಢ ದೇಹವುಳ್ಳ ಯುವ ಜನಾಂಗ ಅತ್ಯಗತ್ಯ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕ್ರೀಡೆಗಳಲ್ಲಿ ಪಾಲ್ಗೊಂಡು, ದೈಹಿಕ ಬೆಳವಣಿಗೆ ಜತೆಗೆ ಮಾನಸಿಕವಾಗಿ ಬೆಳವಣಿಗೆ ಹೊಂದಬೇಕು ಎಂದು ಕಿವಿಮಾತು ಹೇಳಿದರು.
ರಾಜ್ಯ ಮಟ್ಟದ ಈ ಕ್ರೀಡಾಕೂಟವನ್ನು ನಾಲ್ಕು ಗುಂಪುಗಳನ್ನಾಗಿ ಮಾಡಿ 16 ತಂಡಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸುತ್ತವೆ. ತಾಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ವಿಜೇತರಿಗೆ ಬಹುಮಾನವನ್ನು ನಗದು ರೂಪದಲ್ಲಿ ನೀಡುವುದು ಈ ಕ್ರೀಡೆಯ ವಿಶೇಷ. ಈ ಕ್ರೀಡಾಕೂಟದಲ್ಲಿನ ವಿಜೇತ ತಂಡಗಳು ರಾಂಚಿಯಲ್ಲಿ ನಡೆಯುವ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲಿವೆ ಎಂದು ತಿಳಿಸಿದರು.
ಬಾಸ್ಕೆಟ್‌ಬಾಲ್ ಹಾಗೂ ವೇಟ್‌ಲಿಫ್ಟಿಂಗ್ ಹೊಸಪೇಟೆಯ ತಾಲೂಕು ಕ್ರೀಡಾಂಗಣದಲ್ಲಿ ಹಾಗೂ ಜುಡೋ, ಫುಟ್‌ಬಾಲ್ ಮತ್ತು ಹ್ಯಾಂಡ್‌ಬಾಲ್ ಪಂದ್ಯಾವಳಿ ಸ್ಥಳೀಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದ್ದು, ರಾಜ್ಯಮಟ್ಟದ ಪಂದ್ಯಾವಳಿಯಲ್ಲಿ 848 ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ ಎಂದು ರಾಜು ಭಾವಿಹಳ್ಳಿ ವಿವರಿಸಿದರು.
ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಕುಮಾರಗೌಡ, ಅಧೀಕ್ಷಕ ಜಂಬಣ್ಣ, ಬಸವರಾಜ್, ಅಂತಾರಾಷ್ಟ್ರೀಯ ಫುಟ್‌ಬಾಲ್ ಕೋಚ್ ಮೇರಿ, ವಿವಿಧ ಜಿಲ್ಲೆಗಳ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪಾಲ್ಗೊಂಡಿದ್ದರು. ರಾಜು ಭಾವಿಹಳ್ಳಿ ಸ್ವಾಗತಿಸಿದರು. ಬಿ.ಜೆ. ಮಂಜುನಾಥ್ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement