ಸುದ್ದಿ ಸಂಕ್ಷೇಪ
ಇಂದು ಸಾಂಸ್ಕೃತಿಕ ಸೌರಭ
ಬಳ್ಳಾರಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನ. 25ರಂದು ಚಿಗುರು ಹಾಗೂ ಸಾಂಸ್ಕೃತಿಕ ಸೌರಭ ಕಾರ್ಯಕ್ರಮ ಹಮ್ಮಿಕೊಂಡಿದೆ. ಬಾಲ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ನಿಟ್ಟನಲ್ಲಿ ಚಿಗುರು ಕಾರ್ಯಕ್ರಮ ಹಮ್ಮಿಕೊಂಡಿದ್ದು, ಹಗರಿಬೊಮ್ಮನಹಳ್ಳಿಯ ವಾಸವಿ ಕಲ್ಯಾಣ ಮಂಟಪದಲ್ಲಿ ನ. 25ರ ಸಂಜೆ 6.30ಕ್ಕೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಬಳ್ಳಾರಿಯ ಬಿ.ಆರ್. ಹನಿ ಶಾಸ್ತ್ರೀಯ ನೃತ್ಯ ಪ್ರದರ್ಶನ ನೀಡಲಿದ್ದಾರೆ. ಸಾಂಸ್ಕೃತಿಕ ಸೌರಭ ಕಾರ್ಯಕ್ರಮವನ್ನು ನ. 25ರ ಸಂಜೆ 6.30ಕ್ಕೆ ಬಳ್ಳಾರಿ ತಾಲೂಕು ಬ್ಯಾಡರ ಬೆಳಗಲ್ಲು ಗ್ರಾಮದ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಬಳ್ಳಾರಿಯ ಎಂ. ನಾಗಭೂಷಣ ಅವರು ಹಿಂದೂಸ್ತಾನಿ ಶಾಸ್ತ್ರೀಯ ಗಾಯನ ಪ್ರಸ್ತುತಪಡಿಸಲಿದ್ದಾರೆ ಎಂದು ಇಲಾಖೆ ಸಹಾಯಕ ನಿರ್ದೇಶಕ ನಾಗರಾಜ್ ತಿಳಿಸಿದ್ದಾರೆ.
ಬಳ್ಳಾರಿ: ಇಂದು ಬತ್ತ ಕ್ಷೇತ್ರೋತ್ಸವ
ಬಳ್ಳಾರಿ: ಕೃಷಿ ಇಲಾಖೆಯಿಂದ ನ. 25ರಂದು ಬೆಳಗ್ಗೆ 11 ಗಂಟೆಗೆ ಬಳ್ಳಾರಿಯ ಮಂಗಮ್ಮ ಕ್ಯಾಂಪಿನ ಎಚ್ಎಲ್ಸಿ ಕಾಲುವೆ ಡಿಪಿ ನಂ. 15ರ ಬಳಿಯಿರುವ ತಾಕಿನಲ್ಲಿ ಕೂರಿಗೆ ಬತ್ತ ಕ್ಷೇತ್ರೋತ್ಸವವನ್ನು ಏರ್ಪಡಿಸಿದೆ ಬಳ್ಳಾರಿ ತಾಲೂಕು ಸಹಾಯಕ ಕೃಷಿ ನಿರ್ದೇಶಕ ಎನ್. ಕೆಂಗೇಗೌಡ ತಿಳಿಸಿದ್ದಾರೆ. ಭೂ-ಚೇತನ ಯೋಜನೆಯಡಿ ಮುಂಡರಗಿಯ ಸಿ. ರಾಮಾಂಜನೇಯಲು ಅವರು ನಾಟಿ ಮಾಡುವ ಬದಲು ಕೂರಿಗೆ ಮೂಲಕ ಬಿತ್ತನೆ ಮಾಡಿ ಬೆಳೆದ ಬತ್ತದ ಬೆಳೆಯ ಕ್ಷೇತ್ರೋತ್ಸವನ್ನು ಹಮ್ಮಿಕೊಳ್ಳಲಾಗಿದೆ. ರೈತ ಬಾಂಧವರು ಕ್ಷೇತ್ರೋತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮಾಹಿತಿ ಪಡೆದುಕೊಳ್ಳಬೇಕೆಂದು ಮನವಿ ಮಾಡಿದ್ದಾರೆ.