ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಸ್ಲಂ ಪ್ರದೇಶದ ಜನರ ಆರೋಗ್ಯ ರಕ್ಷಣೆಯಾಗಲಿ

Mainashree
Updated On : 25 Nov 2013, 10:53 am

ಕನ್ನಡಪ್ರಭ ವಾರ್ತೆ, ಹೊಸಪೇಟೆ, ನ. 24
ಸ್ಲಂ ಪ್ರದೇಶದ ಜನರು ಆರೋಗ್ಯ ಕಾಪಾಡುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ. ನಗರ ಪ್ರದೇಶದಲ್ಲಿ ಆಸ್ಪತ್ರೆಗಳನ್ನು ನಿರ್ಮಿಸುವ ಬದಲಿಗೆ ಸ್ಲಂ ಪ್ರದೇಶದಲ್ಲಿ ಆಸ್ಪತ್ರೆಗಳನ್ನು ನಿರ್ಮಿಸುವ ಮೂಲಕ ಸ್ಲಂ ಜನರ ಆರೋಗ್ಯ ಕಾಪಾಡಲು ಮುಂದಾಗಬೇಕು ಎಂದು ನಗರದ ನೂರು ಹಾಸಿಗೆ ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ. ಎರ್ರಿಯಪ್ಪ ಹೇಳಿದರು.
ನಗರದ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಆವರಣದಲ್ಲಿ ಸ್ಲಂ ಜನಾಂದೋಲನ-ಕರ್ನಾಟಕ, ಹೊಸಪೇಟೆ ಸ್ಲಂ ಜನಜಾಗೃತಿ ಆಂದೋಲನ ಸಮಿತಿ, ಮಹಿಳಾ ಘಟಕ, ಸಮಾನ ಮಕ್ಕಳ ಮಂಟಪ ಮತ್ತು ತಾಲೂಕು ಆರೋಗ್ಯ ಇಲಾಖೆ ಆಶ್ರಯದಲ್ಲಿ ಶನಿವಾರ ನಡೆದ ಮಹಿಳೆಯರ ಮತ್ತು ಮಕ್ಕಳ ಉಚಿತ ಆರೋಗ್ಯ ತಪಾಸಣೆ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ಸ್ಲಂ ಪ್ರದೇಶದ ಜನರು ಆರ್ಥಿಕ ಸಂಕಷ್ಟದಿಂದ ಹಲವು ಕಾಯಿಲೆಗಳಿಂದ ನರಳುವಂತಾಗಿದೆ. ಅಂತಹ ಜನರಿಗಾಗಿ ಉಚಿತ ತಪಾಸಣೆ ನಡೆಸುವ, ಸ್ಲಂ ಜನರಲ್ಲಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದರು.
ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಡಾ. ದೊಡ್ಡಮಣಿ, ಸರ್ಕಾರಿ ಆಸ್ಪತ್ರೆಯ ಡಾ. ಶೈಲಜಾ ಪಾಟೀಲ್, ಡಾ. ಕೊಟ್ರೇಶ್, ತಾಲೂಕು ಆರೋಗ್ಯ ಹಿರಿಯ ಸಹಾಯಕರಾದ ಧರ್ಮಣ್ಣಗೌಡ, ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಮುಖ್ಯಗುರು ಕಂಪ್ಲಿ ಚಂದ್ರಪ್ಪ, ಸ್ಲಂ ಜನಾಂದೋಲನ-ಕರ್ನಾಟಕದ ರಾಜ್ಯ ಸಂಘಟನಾ ಸಂಚಾಲಕ ರಾಮಚಂದ್ರ, ಹೊಸಪೇಟೆ ಸ್ಲಂ ಕಮಿಟಿ ಪ್ರಧಾನ ಕಾರ್ಯದರ್ಶಿ ಎನ್. ಹುಲಿಗೆಮ್ಮ, ಅಧ್ಯಕ್ಷ ಕೆ. ಸುನೀಲ್, ಸಂಚಾಲಕ ಹನುಮಂತರಾಯ, ಸಮಾನ ಮಕ್ಕಳ ಮಂಟಪ ಸಂಯೋಜಕ ಕೆ. ವೆಂಕಟೇಶುಲು, ಸಂಘಟನೆಯ ಕಾರ್ಯಕರ್ತರಾದ ಗದುಗಿನ ಗಿರೀಶ್, ಮಾರೆಮ್ಮ, ವೆಂಕಮ್ಮ, ಗೀತಾ, ತಿಪ್ಪಮ್ಮ, ನಾಗಲಕ್ಷ್ಮೀ ಇತರರು ಸಭೆಯಲ್ಲಿ ಭಾಗವಹಿಸಿದ್ದರು. ಆರೋಗ್ಯ ತಪಾಸಣಾ ಶಿಬಿರದಲ್ಲಿ ಸುಮಾರು 150ಕ್ಕೂ ಹೆಚ್ಚು ಮಹಿಳೆಯರು ಹಾಗೂ 200 ಕ್ಕೂ ಹೆಚ್ಚು ಮಕ್ಕಳು ಪಾಲ್ಗೊಂಡಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement