ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಡಿ.1ರಂದು ಏಡ್ಸ್ ಜಾಗೃತಿ ಜಾಥಾ

Lingaraj Badiger
Updated On : 28 Nov 2013, 11:08 am

ಕನ್ನಡಪ್ರಭ ವಾರ್ತೆ, ಬಳ್ಳಾರಿ, ನ. 27
ವಿಶ್ವ ಏಡ್ಸ್ ದಿನಾಚರಣೆ ಅಂಗವಾಗಿ ಡಿ. 1ರಂದು ಏಡ್ಸ್ ಜಾಗೃತಿ ಜಾಥಾವನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಂ.ಕೆ. ಪಾಟೀಲ್ ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನಡೆದ ವಿಶ್ವ ಏಡ್ಸ್ ದಿನಾಚರಣೆ ಕುರಿತು ಪೂರ್ವಭಾವಿ ಸಭೆ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಜಾಥಾ ಅಂದು ಬೆಳಗ್ಗೆ 10.30 ಗಂಟೆಗೆ ಚಾಲನೆಗೊಳ್ಳಲಿದ್ದು, ಜಿಲ್ಲಾ ಆಸ್ಪತ್ರೆಯಿಂದ ಪವನ್ ಹೋಟೆಲ್, ಶ್ರೀರಾಂಪುರ ಕಾಲನಿ, ರೂಪನಗುಡಿ ರಸ್ತೆ, ವಡ್ಡರಬಂಡೆ, ಬೆಂಗಳೂರು ರಸ್ತೆ, ಕಾಳಮ್ಮ ಬೀದಿ, ಮೋತಿ ಸರ್ಕಲ್ ಮೂಲಕ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮುಕ್ತಾಯಗೊಳ್ಳಲಿದೆ. ಜಾಥಾದಲ್ಲಿ ಎಂಎಸ್‌ಡಬ್ಲ್ಯು ವಿದ್ಯಾರ್ಥಿಗಳು, ಎನ್‌ಸಿಸಿ, ಎನ್‌ಎಸ್‌ಎಸ್, ನೆಹರು ಯುವ ಕೇಂದ್ರ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ಎಫ್‌ಪಿಎಐ, ಮತ್ತಿತರ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.  
ವೇದಿಕೆ ಕಾರ್ಯಕ್ರಮವನ್ನು ಹೊನ್ನಳ್ಳಿ ತಾಂಡಾದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಸ್ಪಾಂಜ್ ಐರನ್, ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಹಮ್ಮಿಕೊಳ್ಳಲಾಗಿದೆ.  ಏಡ್ಸ್ ಜಾಗೃತಿ ಆಂದೋಲನ ಕುರಿತು ಜಿಲ್ಲೆಯ 7 ತಾಲೂಕುಗಳಲ್ಲಿ 40 ದಿನಗಳ ಕಾಲ 80 ಜಾನಪದ ಸಂಗೀತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಬೆಳಗಾವಿಯ ಶ್ರೀಹರಿ ಕಲಾತಂಡದವರು ಈ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಡಿ.1ರಂದು ಬೆಳಗ್ಗೆ ಕೊಂಡಯ್ಯ ನಗರದಲ್ಲಿ ರಕ್ತದಾನ ಶಿಬಿರವನ್ನೂ ಏರ್ಪಡಿಸಲಾಗಿದೆ. ಈ ಬಾರಿ ಘೋಷಣೆ ಕಳೆದ ವರ್ಷದಂತೆ ಸೊನ್ನೆಗೆ ತನ್ನಿ ಹೊಸ ಸೋಂಕು, ಕಳಂಕ ಮತ್ತು ತಾರತಮ್ಯ ಹಾಗೂ ಏಡ್ಸ್ ಸಂಬಂಧದ ಮರಣವನ್ನು ಸೊನ್ನೆಗೆ ತರುವುದು ಎಂಬುದಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಪಂಪಾಪತಿ, ತಾಲೂಕು ಆರೋಗ್ಯಾಧಿಕಾರಿ ಡಾ. ವೆಂಕಟೇಶಮೂರ್ತಿ, ಜಿಲ್ಲಾ ಏಡ್ಸ್ ನಿಯಂತ್ರಣ ಕಾರ್ಯಕ್ರಮಾಧಿಕಾರಿ ಡಾ. ನರಸಿಂಹಮೂರ್ತಿ, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಎನ್‌ಎಸ್‌ಎಸ್, ಎನ್‌ಸಿಸಿ ಅಧಿಕಾರಿಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement