ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ರೈತರ ಸಮಸ್ಯೆ ಪರಿಹಾರಕ್ಕೆ ಪ್ರಾಮಾಣಿಕ ಯತ್ನ ಇಲ್ಲ: ರಂಭಾಪುರಿಶ್ರೀ ಬೇಸರ

Lingaraj Badiger
Updated On : 30 Nov 2013, 11:07 am

ಸಿರುಗುಪ್ಪ: ದೇಶಕ್ಕೆ ಅನ್ನ ನೀಡುವ ಶಕ್ತಿ ರೈತರಿಗೆ ಬಿಟ್ಟರೆ ಬೇರೆ ಯಾರಿಗೂ ಸಾಧ್ಯ ಇಲ್ಲ. ದುರ್ದೈವದ ಸಂಗತಿ ಎಂದರೆ ರೈತರಿಗೆ ಸಮಸ್ಯೆಗಳು ಬಂದಾಗ ಯಾವುದೇ ಸರ್ಕಾರಗಳು ಸಮಸ್ಯೆ ಬಗೆಹರಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಿಲ್ಲ ಎಂದು ರಂಭಾಪುರಿ ಪೀಠದ ವೀರಸೋಮೇಶ್ವರ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದರು.
ಸಿರುಗುಪ್ಪ ತಾಲೂಕು ಹಚ್ಚೊಳ್ಳಿ ಗ್ರಾಮದಲ್ಲಿ ವೀರಭದ್ರೇಶ್ವರ ಶಿಲಾಮೂರ್ತಿ ಪ್ರತಿಷ್ಠಾಪನೆ ಹಾಗೂ ಧರ್ಮಸಭೆಯಲ್ಲಿ ಮಾತನಾಡಿದ ಅವರು, ಬೆಳಗಾವಿಯಲ್ಲಿ ವಿಠಲ ಅರಭಾವಿ ಎಂಬ ರೈತ ಬಹು ದಿನಗಳಿಂದ ಹೊರಾಟ ನಡೆಸುತ್ತಿದ್ದರೂ ಅದಿವೇಶನದಲ್ಲಿದ್ದ ಮುಖ್ಯಮಂತ್ರಿಗಳು ಆ ಸ್ಥಳಕ್ಕೆ ಭೇಟಿ ನೀಡಿ ರೈತರೊಂದಿಗೆ ಸಮಾಲೋಚಿಸಿದ್ದರೆ ರೈತನ ಪ್ರಾಣ ಉಳಿಯುತ್ತಿತ್ತು. ಈ ವಿಷಯದಲ್ಲಿ ಸರ್ಕಾರ ಕೊಂಚ ಎಡವಿದೆ ಎಂದು ಅಭಿಪ್ರಾಯಿಸಿದರು.
ಇದು ಒಂದು ಭಾಗದ ರೈತರ ವಿಚಾರವಲ್ಲ, ರಾಜ್ಯದ ರೈತರು ಅನೇಕ ತೊಂದರೆಗಳಿಗೆ ಒಳಗಾಗಿದ್ದಾರೆ. ಅಂತಹ ಸಮಸ್ಯೆಗಳನ್ನು ಯಾವುದೇ ಅನಾಹುತ ನಡೆಯುವುದಕ್ಕು ಮುಂಚೆ ಸರ್ಕಾರ ಎಚ್ಚೆತ್ತು ಅವರ ತೊಂದರೆಗಳನ್ನು ಬಗೆಹರಿಸಬೇಕು. ಅದು ಸರ್ಕಾರದ ಕರ್ತವ್ಯ. ಈ ಬಗ್ಗೆ ನಿರ್ಲಕ್ಷ್ಯ ವಹಿಸುವುದು ಸರಿಯಲ್ಲ ಎಂದು ಸಲಹೆ ನೀಡಿದರು. ಈ ನಿಟ್ಟಿನಲ್ಲಿ ರೈತರ ಯಾವುದೇ ನ್ಯಾಯಯುತ ಹೋರಾಟಗಳಿಗೆ ಪಂಚಪೀಠಗಳು ಸನ್ನದ್ಧ ಎಂದರು.
ಕಾರ್ಯಕ್ರಮದಲ್ಲಿ ಮರಿಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ, ವಾಮದೇವ ಮಹಾಂತ ಶಿವಾಚಾರ್ಯರು, ಶಾಂತಮಲ್ಲ ಶಿವಾಚಾರ್ಯರು, ಗಜದಂಡ ಶಿವಾಚಾರ್ಯರು, ಸೋಮನಾಥ ಶಿವಾಚಾರ್ಯರು, ಮಲ್ಲಿಕಾರ್ಜುನ ಶಿವಾಚಾರ್ಯರು, ಕರಿಬಸಯ್ಯ ಶಿವಾಚಾರ್ಯರು, ಶಿವರುದ್ರಮುನಿ ಸ್ವಾಮೀಜಿ ಆಶೀರ್ವಚನ ನೀಡಿದರು.
ಮಾಜಿ ಶಾಸಕ ಟಿ.ಎಂ. ಚಂದ್ರಶೇಖರಯ್ಯ, ಚೊಕ್ಕಬಸವನಗೌಡ, ಎಚ್.ಕೆ. ಮಲ್ಲಿಕಾರ್ಜುನಯ್ಯ, ಶರಣಬಸವನಗೌಡ, ಸಾವುಕಾರ ಚನ್ನಪ್ಪ, ಗೋಪಾಲರೆಡ್ಡಿ ಸೇರಿದಂತೆ ಇತರರು ಇದ್ದರು.
--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement