ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ನಾಳೆಯಿಂದ ಸಾಂಸ್ಕೃತಿಕ ಕಾರ್ಯಕ್ರಮ

Vishwanath S
Updated On : 5 Oct 2013, 11:32 am

ಕನ್ನಡಪ್ರಭ ವಾರ್ತೆ, ಹೊಸಪೇಟೆ, ಅ. 4
ಕೈರಳಿ ಕಲ್ಚರಲ್ ಅಸೋಸಿಯೇಶನ್ ವತಿಯಿಂದ ನಗರದ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಅ. 6ರಂದು 2.30ಕ್ಕೆ 13ನೇ ವರ್ಷದ ಓಣಂ ಹಬ್ಬ ಆಚರಣೆ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಅಸೋಸಿಯೇಶನ್‌ನ ಅಧ್ಯಕ್ಷ ಎಂ.ಕೆ. ಮತ್ತಾಯಿ ತಿಳಿಸಿದ್ದಾರೆ.
ನಗರದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಆರೋಗ್ಯ ಸಚಿವ ಯು.ಟಿ. ಖಾದರ್ ಕಾರ್ಯಕ್ರಮ ಉದ್ಘಾಟಿಸುವರು. ಸ್ಥಳೀಯ ಶಾಸಕ ಬಿ.ಎಸ್. ಆನಂದ್ ಸಿಂಗ್, ಸಹಾಯಕ ಆಯುಕ್ತ ಪಿ. ಸುನೀಲ್ ಕುಮಾರ್, ತಹಸೀಲ್ದಾರ್ ರಮೇಶ್ ಕೊನರೆಡ್ಡಿ, ಸಮಾಜ ಸೇವಕ ಹಾಗೂ ಕಾಂಗ್ರೆಸ್ ಮುಖಂಡ ದೀಪಕ್ ಕುಮಾರ್ ಸಿಂಗ್, ಬಳ್ಳಾರಿಯ ಕೇರಳ ಕಲ್ಚರಲ್ ಅಸೋಸಿಯೇಶನ್ ಅಧ್ಯಕ್ಷ ಗುರು ಮ್ಯಾಥ್ಯೂ ಇತರರು ಭಾಗವಹಿಸುವರು.
ಓಣಂ ಹಬ್ಬದ ಪ್ರಯುಕ್ತ ಹೂವಿನ ರಂಗೋಲಿ ಸ್ಪರ್ಧೆ, ಹಗ್ಗ ಜಗ್ಗಾಟ, ಮ್ಯುಜಿಕಲ್ ಚೇರ್ ಸೇರಿದಂತೆ ವಿವಿಧ ಕ್ರೀಡೆಗಳು ನಡೆಯಲಿವೆ. ಅನಂತರ ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಲಿದ್ದು, ಇದೇ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಗುವುದು.
ಸಂಜೆ ಕೇರಳದ ಕಣ್ಣೂರಿನ ಯುನಿವರ್ಸಲ್ ಅರ್ಕೆಸ್ಟ್ರಾ ಕಲಾವಿದರಿಂದ ಗಾನಮೇಳ ನಡೆಯಲಿದೆ ಎಂದು ಅವರು ವಿವರಿಸಿದರು. ಕೈರಳಿ ಕಲ್ಚರಲ್ ಅಸೋಸಿಯೇಶನ್‌ನ ಕಾರ್ಯದರ್ಶಿ ಪಿ. ಸುಂದರಂ, ಮುಖಂಡರಾದ ಸೆಲ್ವಿಜಾರ್ಜ್, ಎಂ.ಡಿ. ವಿಜಯನ್, ದೇವದಾಸ್ ಮತ್ತಿತರರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement