ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ವಿದ್ಯಾರ್ಥಿಗಳಿಗೆ ಸೇವಾ ಮನೋಭಾವನೆ ಮುಖ್ಯ

Vishwanath S
Updated On : 5 Oct 2013, 11:37 am

ಹೊಸಪೇಟೆ: ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದ ಜೊತೆಗೆ ಸೇವಾ ಮನೋಭಾವನೆ ಬೆಳೆಸಿಕೊಳ್ಳಬೇಕಾಗಿದೆ ಎಂದು ಇಲ್ಲಿನ ಜಿ.ಎಂ.ಆರ್. ಸಂಸ್ಥೆಯ ವ್ಯವಸ್ಥಾಪಕ ನಾಗರಾಜ್ ರಾಮಯ್ಯ ಹೇಳಿದರು.
ನಗರದ ಟಿ.ಬಿ. ಡ್ಯಾಂನ ಪಿ.ಎಲ್.ಸಿ. ಕಾಲೋನಿಯಲ್ಲಿ ಟಿ.ಬಿ. ಡ್ಯಾಂ ಸರ್ಕಾರಿ ಪದವಿಪೂರ್ವ ಕಾಲೇಜ್‌ನಿಂದ ಸೋಮವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಸೇವಾ ಯೋಜನೆಯ ಮೂಲಕ ಶಾಲಾ-ಕಾಲೇಜುಗಳಲ್ಲಿ ಸೇವಾ ಮನೋಭಾವನೆ ಬೆಳೆಸುವ ಜೊತೆಗೆ ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಲು ಎನ್‌ಎಸ್‌ಎಸ್ ಶಿಬಿರವು ಪ್ರೇರೇಪಿಸುತ್ತದೆ. ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರದಲ್ಲಿ ವಿದ್ಯಾರ್ಥಿಗಳು ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಲು ಮತ್ತು ಪ್ರತಿಭಾವಂತರಾಗಿ ಗುರುತಿಸಿಕೊಳ್ಳಲು ಸಹಕಾರಿಯಾಗಿದೆ ಎಂದರು.
ಪತ್ರಕರ್ತ ಕೆ. ಲಕ್ಷ್ಮಣ ಮಾತನಾಡಿದರು. ಬೆಳಗಾವಿ ವಿಭಾಗದ ಸಹಾಯಕ ಸಂಯೋಜನಾಧಿಕಾರಿ ಪಿ.ಎಸ್. ಗಿರಿರಾಜ್, ಎಸ್‌ಟಿಎಂಸಿ ಅಧ್ಯಕ್ಷ ಕುಮಾರ್, ಉಪನ್ಯಾಸಕ ರಾಘವೇಂದ್ರ ಸೂಡಿ ಸಭೆಯಲ್ಲಿ ಮಾತನಾಡಿದರು.
ಪ್ರಾಚಾರ್ಯ ಹನುಮಂತಪ್ಪ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕ ಹಾಗೂ ಎನ್.ಎಸ್. ಯೋಜನಾಧಿಕಾರಿ ಪಿ. ನಾಗರಾಜ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ವಿನಯ್ ವಂದಿಸಿದರು. ನವೀನ್‌ಕುಮಾರ್ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement