ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ರಾಷ್ಟ್ರಪ್ರೇಮ ಬೆಳೆಸಿಕೊಳ್ಳಿ

Vishwanath S
Updated On : 6 Oct 2013, 11:29 am

ಕನ್ನಡಪ್ರಭ ವಾರ್ತೆ, ಬಳ್ಳಾರಿ, ಅ. 5
ವಿದ್ಯಾರ್ಥಿಗಳು ರಾಷ್ಟ್ರಪ್ರೇಮ, ನಿಷ್ಠೆ, ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಜಿಪಂ ಅಧ್ಯಕ್ಷೆ ಶೋಭಾ ಬೆಂಡಿಗೇರಿ ತಿಳಿಸಿದರು.
ನಗರದ ಬಾಲಕಿಯರ ಸರ್ಕಾರಿ ಪದವಿಪೂರ್ವ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕ ತಾಲೂಕಿನ ಅಲ್ಲೀಪುರದಲ್ಲಿ ಹಮ್ಮಿಕೊಂಡಿರುವ ಎನ್‌ಎಸ್‌ಎಸ್ ವಿಶೇಷ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಪ್ರತಿಯೊಬ್ಬ ವಿದ್ಯಾರ್ಥಿ ಪರಿಸರ ನೈರ್ಮಲ್ಯಕ್ಕೆ ಆದ್ಯತೆ ನೀಡಬೇಕು. ಜತೆಗೆ ಈ ಶಿಬಿರದಲ್ಲಿ ಸ್ವಚ್ಛತೆ ಕುರಿತು ಗ್ರಾಮಸ್ಥರಲ್ಲಿ ಅರಿವು ಮೂಡಿಸಬೇಕು ಎಂದು ಸಲಹೆ ನೀಡಿದರು.
ಕಮ್ಮರಚೇಡು ಮಠದ ಕಲ್ಯಾಣ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಕಾಲೇಜಿನ ಪ್ರಾಚಾರ್ಯ ಕೆ. ತಿಮ್ಮಪ್ಪ ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಶೋಭಾ ಮಾತನಾಡಿದರು.
ಈ ಸಂದರ್ಭದಲ್ಲಿ ಹಿರಿಯ ಉಪನ್ಯಾಸಕ ನಾಗೇಂದ್ರರಾವ್, ಕಾಲೇಜಿನ ಸಿಬ್ಬಂದಿ ಮತ್ತಿತರರು ಇದ್ದರು. ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಬಿ.ವಿ. ಘನಮಲ್ಲಪ್ಪ ಪ್ರಸ್ತಾವಿಕವಾಗಿ ಮಾತನಾಡಿ, ನಂತರ ಶಿಬಿರಾರ್ಥಿಗಳಿಗೆ ಎನ್‌ಎಸ್‌ಎಸ್ ಪ್ರತಿಜ್ಞಾವಿಧಿ ಬೋಧಿಸಿದರು. ತಿಪ್ಪಮ್ಮ ಪ್ರಾರ್ಥಿಸಿದರು. ಉಪನ್ಯಾಸಕರಾದ ಮಹಾಲಿಂಗನಗೌಡ ಸ್ವಾಗತಿಸಿದರು. ಎ.ಎಂ. ಜಯಶ್ರೀ ನಿರೂಪಿಸಿದರು. ಸಂಗಮೇಶ್ವರ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement