ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಹಂಪಿ ವಿವಿಯಲ್ಲಿ 8ರಿಂದ ವಿಚಾರ ಸಂಕಿರಣ

Vishwanath S
Updated On : 6 Oct 2013, 11:29 am

ಕನ್ನಡಪ್ರಭ ವಾರ್ತೆ, ಹೊಸಪೇಟೆ, ಅ. 5
ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಉನ್ನತ ಶಿಕ್ಷಣ ಆಶಯ, ವಾಸ್ತವ, ಭವಿಷ್ಯ ಭಾಷೆ, ಸಾಹಿತ್ಯ, ಸಂಸ್ಕೃತಿಯ ಹಿನ್ನೆಲೆ ಕುರಿತಾದ ರಾಷ್ಟ್ರೀಯ ವಿಚಾರ ಸಂಕಿರಣ ಹಂಪಿ ವಿಶ್ವವಿದ್ಯಾಲಯದ ಭುವನ ವಿಜಯದಲ್ಲಿ ಅ. 8 ಮತ್ತು 9ರಂದು ನಡೆಯಲಿದೆ.
ಅ. 8ರಂದು ಬೆಳಗ್ಗೆ 10.45ಕ್ಕೆ ಕುವೆಂಪು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಪಿ. ವೆಂಕಟರಾಮಯ್ಯ ಕಾರ್ಯಕ್ರಮ ಉದ್ಘಾಟಿಸುವರು. ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಡಾ. ಹಿ.ಚಿ. ಬೋರಲಿಂಗಯ್ಯ ಅಧ್ಯಕ್ಷತೆ ವಹಿಸುವರು. ಮಧ್ಯಾಹ್ನ 12 ಗಂಟೆಗೆ ಶಿಕ್ಷಣ ಮಾಧ್ಯಮ ಕುರಿತು ಬೆಂಗಳೂರಿನ ಪ್ರೊ. ಓ.ಎಲ್. ನಾಗಭೂಷಣಸ್ವಾಮಿ, ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನ ಸಹಪ್ರಾಧ್ಯಾಪಕ ಡಾ. ಮಲ್ಲಿಕಾರ್ಜುನ ಮೇಟಿ ವಿಷಯ ಮಂಡಿಸಲಿದ್ದಾರೆ. ಮಧ್ಯಾಹ್ನ 2.30ಕ್ಕೆ 'ಪಠ್ಯಕ್ರಮ-ಪಠ್ಯವಸ್ತು' ಕುರಿತು ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ ಪ್ರೊ. ವಿ.ಎಸ್. ಶ್ರೀಧರ, ಬೆಂಗಳೂರಿನ ಸರ್ಕಾರಿ ಕಲಾ ಕಾಲೇಜಿನ ಸಹಪ್ರಾಧ್ಯಾಪಕ ಡಾ. ಕೆ.ವೈ. ನಾರಾಯಣಸ್ವಾಮಿ ವಿಷಯ ಮಂಡಿಸಲಿದ್ದಾರೆ.
ಸಂಜೆ 4 ಗಂಟೆಗೆ 'ಸಂಶೋಧನೆ-ಅಧ್ಯಯನ' ಕುರಿತು ಕುವೆಂಪು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ. ರಾಜೇಂದ್ರ ಚೆನ್ನಿ, ಬೆಂಗಳೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ. ನಟರಾಜ್ ಹುಳಿಯಾರ್ ವಿಷಯ ಮಂಡಿಸಲಿದ್ದಾರೆ. ಅ. 9ರಂದು ಬೆಳಗ್ಗೆ 10.30ಕ್ಕೆ ಮೌಲ್ಯಮಾಪನ ಕುರಿತು ಹಂಪಿ ಕನ್ನಡ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಡಾ. ಟಿ.ಆರ್. ಚಂದ್ರಶೇಖರ್, ಧಾರವಾಡದ ಸಹಪ್ರಾಧ್ಯಾಪಕ ಡಾ. ವಿನಯಾ ಒಕ್ಕುಂದ ವಿಷಯ ಮಂಡಿಸಲಿದ್ದಾರೆ. ಮಧ್ಯಾಹ್ನ 12ಕ್ಕೆ 'ನೀತಿ ನಿರೂಪಣೆ' ಕುರಿತು ಬೆಂಗಳೂರು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಡಾ. ಎಸ್. ಚಂದ್ರಶೇಖರ, ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ. ವಿ.ಬಿ. ತಾರಕೇಶ್ವರ ವಿಷಯ ಮಂಡಿಸಲಿದ್ದಾರೆ.
ಮಧ್ಯಾಹ್ನ 3.30ಕ್ಕೆ ಸಮಾರೋಪ ಸಮಾರಂಭದಲ್ಲಿ ನವದೆಹಲಿಯ ಅಮೆರಿಕನ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಸ್ಟಡೀಸ್‌ನ ನಿರ್ದೇಶಕ ಡಾ. ಪುರುಷೋತ್ತಮ ಬಿಳಿಮಲೆ ಸಮಾರೋಪ ಭಾಷಣ ಮಾಡುವರು. ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಸಚಿವ ಡಾ. ವಿಜಯ್ ಪೂಣಚ್ಚ ತಂಬಡ ಸಮಾರಂಭದ ಅಧ್ಯಕ್ಷತೆ ವಹಿಸುವರು ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಭಾಷಾ ನಿಕಾಯ ಡೀನ್ ಹಾಗೂ ವಿಚಾರ ಸಂಕಿರಣದ ಸಂಚಾಲಕ ಡಾ. ಡಿ. ಪಾಂಡುರಂಗಬಾಬು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement