ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್‌ಗೆ ಸನ್ಮಾನ

Lingaraj Badiger
Updated On : 9 Oct 2013, 11:30 am

ಕನ್ನಡಪ್ರಭ ವಾರ್ತೆ, ಬಳ್ಳಾರಿ, ಅ. 8
ವೀರಶೈವ ವಿದ್ಯಾವರ್ಧಕ ಸಂಘ ಹೈದರಾಬಾದ್ ಕರ್ನಾಟಕ ಪ್ರದೇಶದಲ್ಲಿ ಉತ್ತಮ ಶೈಕ್ಷಣಿಕ ಸೇವೆ ಸಲ್ಲಿಸುತ್ತಿದ್ದು, ಸಂಘದಿಂದ ವೈದ್ಯಕೀಯ ಕಾಲೇಜು ಸ್ಥಾಪಿಸಲು ಮುಂದೆ ಬಂದಲ್ಲಿ ಸರ್ಕಾರ ಹಾಗೂ ಇಲಾಖೆಯಿಂದ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಹೇಳಿದರು.
ನಗರದ ವೀರಶೈವ ವಿದ್ಯಾವರ್ಧಕ ಸಂಘದ ಕಚೇರಿಯಲ್ಲಿ ಸಚಿವರಿಗೆ ಏರ್ಪಡಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ, ಅನಂತರ ಅವರು ಮಾತನಾಡಿದರು. ಶೈಕ್ಷಣಿಕ ಕ್ಷೇತ್ರದಲ್ಲಿ ವೀ.ವಿ. ಸಂಘ ಉತ್ತಮ ಸಾಧನೆ ಮಾಡಿದ್ದು, ಗ್ರಾಮಾಂತರ ಪ್ರದೇಶದ ಜನತೆಗೆ ಶಿಕ್ಷಣ ಕಲ್ಪಿಸುವಲ್ಲಿ ಯಶಸ್ವಿಯಾಗಿದೆ. ಸಂಘ ಹೊಸ ವೈದ್ಯಕೀಯ ಕಾಲೇಜು ಪ್ರಾರಂಭಿಸುವ ಪ್ರಸ್ತಾವನೆ ಸಲ್ಲಿಸಿದಲ್ಲಿ ಮಂಜೂರಿಗೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುತ್ತದೆ ಎಂದರು.
ಇದೇ ಸಂದರ್ಭದಲ್ಲಿ ಬಳ್ಳಾರಿ ನಗರ ಶಾಸಕ ಅನಿಲ್ ಎಚ್. ಲಾಡ್ ಅವರನ್ನು ಸನ್ಮಾನಿಸಲಾಯಿತು. ವೀವಿ ಸಂಘದ ಅಧ್ಯಕ್ಷ ಅಲ್ಲಂ ಗುರುಬಸವರಾಜ್, ಉಪಾಧ್ಯಕ್ಷ ಕೆ.ಎಂ. ಮಹೇಶ್ವರ ಸ್ವಾಮಿ, ಕಾರ್ಯದರ್ಶಿ ಗುರುಸಿದ್ದಸ್ವಾಮಿ, ಸಹಕಾರ್ಯದರ್ಶಿ ಜೆ.ಎಸ್. ನೇಪಾಕ್ಷಪ್ಪ, ಕೋಶಾಧಿಕಾರಿ ಎಸ್. ಹಿಮಂತ್‌ರಾಜ್, ಕಾರ್ಯಕಾರಿ ಸಮಿತಿ ಸದಸ್ಯರು ಮತ್ತು ಸಂಸ್ಥೆಯ ಶಾಲಾ-ಕಾಲೇಜುಗಳ ಬೋಧಕ-ಬೋಧಕೇತರ ಸಿಬ್ಬಂದಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement