ಅರ್ಜಿ ಆಹ್ವಾನ
ಬಳ್ಳಾರಿ: ಸಿಂಡ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆ ಗ್ರಾಮೀಣ ಪ್ರದೇಶದ ನಿರುದ್ಯೋಗಿ ಯುವಕ, ಯುವತಿಯರಿಗೆ 6 ದಿನಗಳ ಹೈನುಗಾರಿಕೆ ತರಬೇತಿ ನೀಡಲು ಅರ್ಜಿ ಆಹ್ವಾನಿಸಿದೆ. ಅ.21ರಿಂದ 26ರ ವರೆಗೆ ತರಬೇತಿ ನಡೆಯಲಿದೆ. ತರಬೇತಿ ಅವಧಿಯಲ್ಲಿ ಊಟ, ವಸತಿ ಸೌಲಭ್ಯ ನೀಡಲಾಗುವುದು. ಕೌಶಲ್ಯದೊಂದಿಗೆ ಉದ್ಯಮಶೀಲತೆ, ವ್ಯಕ್ತಿತ್ವ ವಿಕಸನಕ್ಕೆ ಸಂಬಂಧಿಸಿದ ಮಾಹಿತಿ ನೀಡಲಾಗುತ್ತದೆ. ಹೈನುಗಾರಿಕೆಯಲ್ಲಿ ಪ್ರಾಥಮಿಕ ಜ್ಞಾನ, ಅನುಭವ ಹೊಂದಿರುವ ಹಾಗೂ ಕನ್ನಡ ಓದಲು, ಬರೆಯಲು ಬರುವ ನಿರುದ್ಯೋಗಿ ಸ್ವ ಉದ್ಯೋಗ ಆಕಾಂಕ್ಷಿಗಳು ತರಬೇತಿ ಪಡೆಯಲು ಅರ್ಹರು. 18ರಿಂದ 45 ವರ್ಷದೊಳಗಿನವರಾಗಿರಬೇಕು. ಆಸಕ್ತರು ಹೆಸರು, ವಿಳಾಸ, ಸಂಪರ್ಕಿಸಲು ಲಭ್ಯವಿರುವ ದೂರವಾಣಿ ಸಂಖ್ಯೆ, ವಯಸ್ಸು, ವಿದ್ಯಾರ್ಹತೆ, ಪಡೆಯಲಿಚ್ಛಿಸುವ ತರಬೇತಿ, ಸಂಬಂಧಿತ ವಿಷಯದ ಪ್ರಾಥಮಿಕ ಜ್ಞಾನ, ಅನುಭವ ಮತ್ತಿತರ ಮಾಹಿತಿಯನ್ನು ಬಿಳಿ ಹಾಳೆ ಮೇಲೆ ಬರೆದು ಪಾಸ್ಪೋರ್ಟ್ ಅಳತೆಯ ಇತ್ತೀಚಿನ ಭಾವಚಿತ್ರ ಲಗತ್ತಿಸಿ, ಅ.16ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ಸಿಂಡ್ ಸ್ವ-ಉದ್ಯೋಗ ತರಬೇತಿ ಸಂಸ್ಥೆ, ದೂರವಾಣಿ ಸಂಖ್ಯೆ 08392-244117ಗೆ ಸಂಪರ್ಕಿಸಬಹುದು ಎಂದು ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ.
ಅರ್ಜಿ ಆಹ್ವಾನ
ಬಳ್ಳಾರಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 2012ನೇ ಸಾಲಿನಲ್ಲಿ ಪ್ರಕಟವಾದ ಸೃಜನೇತರ ಕನ್ನಡ ಗ್ರಂಥಗಳಿಗೆ 2012-13ನೇ ಸಾಲಿನಲ್ಲಿ ಯಾವುದೇ ವಿವಿಯಿಂದ ಯಾವುದೇ ವಿಷಯದ ಬಗ್ಗೆ ಕನ್ನಡದಲ್ಲಿ ಪಿಎಚ್ಡಿ ಪಡೆದ ಮಹಾ ಪ್ರಬಂಧಗಳ ಹಸ್ತಪ್ರತಿ ಮುದ್ರಣಕ್ಕೆ ಹಾಗೂ ಎಂಫಿಲ್ ಪಡೆದ ಪ್ರೌಢ ಪ್ರಬಂಧ ಹಸ್ತಪ್ರತಿ ಮುದ್ರಣಕ್ಕೆ ಧನಸಹಾಯ ನೀಡಲು ಅರ್ಜಿ ಆಹ್ವಾನಿಸಿದೆ. ಅರ್ಜಿ ನಮೂನೆಯನ್ನು ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆಯಬಹುದು. ಆಸಕ್ತರು ನಿಗದಿತ ಅರ್ಜಿಗಳನ್ನು ಅ. 15ರೊಳಗಾಗಿ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಾಂಸ್ಕೃತಿಕ ಸಮುಚ್ಛಯ, ಡಾ. ರಾಜ್ಕುಮಾರ್ ರಸ್ತೆ, ಬಳ್ಳಾರಿ-583101 ಇವರಿಂದ ಪಡೆಯಬಹುದು. ಹೆಚ್ಚಿನ ಮಾಹಿತಿಗೆ ದೂ.ಸಂ- 08392-275182ನ್ನು ಸಂಪರ್ಕಿಸಬೇಕೆಂದು ಇಲಾಖೆ ಸಹಾಯಕ ನಿರ್ದೇಶಕ ಬಿ. ನಾಗರಾಜ್ ತಿಳಿಸಿದ್ದಾರೆ.
ಅನಿಲ ಸೋರಿಕೆ
ಬಳ್ಳಾರಿ: ತಾಲೂಕಿನ ಕುಡಿತಿನಿ ಸಮೀಪದ ಬಳ್ಳಾರಿ ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ 2ನೇ ಘಟಕದಲ್ಲಿ ಗುರುವಾರ ಬೆಳಗ್ಗೆ ಅನಿಲ ಸೋರಿಕೆ ಉಂಟಾಗಿದ್ದು, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಆದರೆ, ಉಪಕರಣಗಳಿಗೆ ಹಾನಿಯುಂಟಾಗಿದೆ. 2ನೇ ಘಟಕದ ವಿದ್ಯುತ್ ಉತ್ಪಾದನೆಯ ಬಾಯ್ಲರ್ನ ತಳಭಾಗದಲ್ಲಿ ಅನಿಲ ಸೋರಿಕೆ ಉಂಟಾಗಿದ್ದು, ಸೋರಿಕೆಯಾದ ಸ್ಥಳದಲ್ಲಿ ಉಷ್ಣತೆ ಹೆಚ್ಚಾಗಿದ್ದರಿಂದ ಬಿಟಿಪಿಎಸ್ನ ತಾಂತ್ರಿಕ ತಂಡ ಪರಿಶೀಲನೆ ಮಾಡಲು ತೊಂದರೆಯಾಗುತ್ತಿದೆ. 2ನೇ ಘಟಕ 500 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡುತ್ತಿದೆ. ಆದರೆ, ತಾತ್ಕಾಲಿಕವಾಗಿ ಹಲವು ದಿನಗಳಿಂದ ಸ್ಥಗಿತಗೊಂಡಿತ್ತು. ಬಿಟಿಪಿಎಸ್ನ ಕಾರ್ಯನಿರ್ವಾಹಕ ನಿರ್ದೇಶಕಿ ರತ್ನಮ್ಮ ಮಾತನಾಡಿ, ಉಷ್ಣತೆ, ಒತ್ತಡ ಹೆಚ್ಚಾದಾಗ ಅನಿಲ ಸೋರಿಕೆಯಾಗುತ್ತದೆ. ಎಷ್ಟು ನಷ್ಟ ಉಂಟಾಗಿದೆ ಎಂದು ನಿರ್ದಿಷ್ಟವಾಗಿ ಹೇಳುವುದು ಕಷ್ಟ. 2 ದಿನಗಳ ಬಳಿಕ ವಿದ್ಯುತ್ ಉತ್ಪಾದನೆ ಆರಂಭಿಸಲಾಗುತ್ತದೆ ಎಂದು ತಿಳಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.