ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಕೂಡ್ಲಿಗಿ: ಅದ್ಧೂರಿ ವಾಲ್ಮೀಕಿ ಜಯಂತಿ ಆಚರಣೆಗೆ ನಿರ್ಧಾರ

Mainashree
Updated On : 12 Oct 2013, 11:13 am

ಕೂಡ್ಲಿಗಿ: ಪಟ್ಟಣದ ತಾಪಂ ಸಭಾಂಗಣದಲ್ಲಿ ತಹಸೀಲ್ದಾರ್ ಜವರೇಗೌಡ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ವಾಲ್ಮೀಕಿ ಜಯಂತಿ ಆಚರಣೆಯ ಪೂರ್ವಭಾವಿ ಸಭೆಯಲ್ಲಿ ಅ. 18ರಂದು ವಾಲ್ಮೀಕಿ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಯಿತು. ವಾಲ್ಮೀಕಿ ದೇವಸ್ಥಾನದ ಬಳಿಯ ವಾಲ್ಮೀಕಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಕಲಾ ತಂಡಗಳೊಂದಿಗೆ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸುವುದು. ಪಟ್ಟಣದ ಚಂದ್ರಶೇಖರ ಆಜಾದ್ ರಂಗಮಂದಿರದಲ್ಲಿ ಸಭೆ ನಡೆಸುವುದು. ವಾಲ್ಮೀಕಿ ಸಮುದಾಯದ ಸಾಧಕರು ಹಾಗೂ ಕಳೆದ ವರ್ಷದ ಎಸ್ಸೆಸ್ಸೆಲ್ಸಿ, ಪಿಯುಸಿ ಮತ್ತು ಪದವಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸುವುದು ಸೇರಿ ಅನೇಕ ವಿಚಾರಗಳನ್ನು ಸಭೆಯಲ್ಲಿ ಚರ್ಚಿಸಿ ತೀರ್ಮಾನಿಸಲಾಯಿತು. ಕೆ. ಮಲ್ಲಣ್ಣ, ಎನ್. ಮುದ್ದಪ್ಪ, ಪಪಂ ಮಾಜಿ ಸದಸ್ಯ ಕಾವಲ್ಲಿ ಶಿವಪ್ಪನಾಯಕ, ವಾಲ್ಮೀಕಿ ಸಮಾಜದ ಬಿ. ಭೀಮೇಶ್ ಇತರರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement