ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಆಶಾ ಕಾರ್ಯಕರ್ತೆಯರ ಗೌರವಧನ ಏರಿಕೆ: ಹರ್ಷ

Mainashree
Updated On : 15 Oct 2013, 12:04 pm

ಬಳ್ಳಾರಿ: ಗ್ರಾಮೀಣ ಭಾಗದಲ್ಲಿ ಸೇವೆ ಸಲ್ಲಿಸುವ ಆಶಾ ಕಾರ್ಯಕರ್ತೆಯರಿಗೆ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಮಾಸಿಕ ರು. 1000 ಹಾಗೂ 200 ಪ್ರಯಾಣ ಭತ್ಯೆ ನೀಡಲು ನಿರ್ಧರಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಕರ್ನಾಟಕ ರಾಜ್ಯ ಆಶಾ ಕಾರ್ಯಕರ್ತೆಯರ ಸಂಘ ಸ್ವಾಗತಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘದ ರಾಜ್ಯ ಕಾರ್ಯದರ್ಶಿ ಡಿ. ನಾಗಲಕ್ಷ್ಮೀ, ಪ್ರಸಕ್ತ ಸಾಲಿನ ಬಜೆಟ್‌ನಲ್ಲಿಯೇ ಕೇಂದ್ರದ ಪ್ರೋತ್ಸಾಹಧನ ಜತೆಗೆ ರಾಜ್ಯದಿಂದಲೂ ಹೆಚ್ಚುವರಿ ಪ್ರೋತ್ಸಾಹ ಧನ ಘೊಷಣೆಯಾಗಿದ್ದ ಹಿನ್ನೆಲೆಯಲ್ಲಿ ಶುಕ್ರವಾರ ಬೆಂಗಳೂರಿನಲ್ಲಿ ನಡೆದ ಸಚಿವ ಸಂಪುಟದಲ್ಲಿ ಈ ನಿರ್ಣಯ ಕೈಗೊಂಡಿರುವುದು ಸ್ವಾಗತಾರ್ಹವಾಗಿದೆ. ಅದೇ ರೀತಿ ಹೆಚ್ಚುವರಿ ಹಣ ಬಿಡುಗಡೆ, ವಿವಿಧ ಸೌಲಭ್ಯಗಳು, ಇತರೆ ರಾಜ್ಯಗಳಲ್ಲಿ ನಿಗದಿ ಮಾಡಿದಂತೆ ರಾಜ್ಯ ಸರ್ಕಾರದಿಂದಲೂ ಜೀವನ ಯೋಗ್ಯ ಮಾಸಿಕ ನಿಗದಿತ ಗೌರವಧನ, ವೇತನ ನಿಗದಿ ಮಾಡಬೇಕು. ಕಾರ್ಯಕರ್ತೆಯರನ್ನು ಕಾಯಂ ಮಾಡಿಕೊಳ್ಳಬೇಕೆಂದು ಈಚೆಗೆ ಬೆಂಗಳೂರಿನ ಟೌನ್‌ಹಾಲ್‌ನಲ್ಲಿ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಬೃಹತ್ ಸಮಾವೇಶದಲ್ಲಿ ರಾಜ್ಯ ಸರ್ಕಾರವನ್ನು ಆಗ್ರಹಿಸಲಾಗಿತ್ತು ಎಂದು ತಿಳಿಸಿದ್ದಾರೆ. ಸಂಘದ ಮನವಿಗೆ ಸ್ಪಂದಿಸಿದ ರಾಜ್ಯದ ಮುಖ್ಯಮಂತ್ರಿ, ಆರೋಗ್ಯ ಸಚಿವ ಹಾಗೂ ಇತರೆ ಇಲಾಖೆ ಅಧಿಕಾರಿಗಳ ಕ್ರಮವನ್ನು ಸ್ವಾಗತಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement