ಇಸ್ಪೀಟ್ ಜೂಜಾಟ: 12 ಸಾವಿರ ವಶ
ಬಳ್ಳಾರಿ: ಇಸ್ಪೀಟ್ ಜೂಜಾಟ ಅಡ್ಡೆಯ ಮೇಲೆ ಪೊಲೀಸರು ದಾಳಿ ಮಾಡಿ, ಮೂವರು ಆರೋಪಿಗಳನ್ನು ಬಂಧಿಸಿ, ಅವರಿಂದ ರು. 12,400 ಗಳನ್ನು ವಶಪಡಿಸಿಕೊಂಡಿರುವ ಘಟನೆ ಹಲಕುಂದಿ ಗ್ರಾಮದಲ್ಲಿ ಭಾನುವಾರ ನಡೆದಿದೆ. ಹಲಕುಂದಿ ಗ್ರಾಮದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ಬಳ್ಳಾರಿ ಗ್ರಾಮೀಣ ಠಾಣೆಯ ಪಿಎಸ್ಐ ಕೆ. ಹೊಸಕೇರಪ್ಪ ಹಾಗೂ ಸಿಬ್ಬಂದಿ ದಾಳಿ ಮಾಡಿ, ಇಸ್ಪೀಟ್ ಜೂಜಾಟ ಆಡುತ್ತಿದ್ದ ಶಿವರಾಂ, ದಾದಸಾಬ್ ಮತ್ತು ಎಸ್. ವಲಿ ಅವರನ್ನು ಬಂಧಿಸಿ, ಅವರಿಂದ ರು. 12,400 ಗಳನ್ನು ವಶಪಡಿಸಿ ಕೊಂಡಿದ್ದಾರೆ. ಈ ಕುರಿತಾಗಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.