ಜಿಲ್ಲಾ ಮಟ್ಟದ ಕ್ರೀಡಾಕೂಟ: ಬಳ್ಳಾರಿ ವಿದ್ಯಾರ್ಥಿಗಳು ಪ್ರಥಮ
ಬಳ್ಳಾರಿ: ನಗರದ ವಿಜಯನಗರ ವೈದ್ಯಕೀಯ ಮಹಾವಿದ್ಯಾಲಯ ಮೈದಾನದಲ್ಲಿ ಇತ್ತೀಚೆಗೆ ಜರುಗಿದ ಪ್ರಾಥಮಿಕ-ಪ್ರೌಢಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಬಳ್ಳಾರಿ ಪ್ರಥಮ ಸ್ಥಾನ ಗಳಿಸಿದೆ.
ಇಲ್ಲಿನ ವಿಡಿಎಸ್ಎಲ್ ಬಾಲಕಿಯರ ಪ್ರೌಢಶಾಲೆಯ ವಿದ್ಯಾರ್ಥಿನಿಯರಾದ ಭಾರ್ಗವಿ, ಪ್ರಿಯಾಂಕ 3 ಕಿ.ಮೀ. ನಡಿಗೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸುವ ಮೂಲಕ ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. 400 ಮೀಟರ್ ಓಟದಲ್ಲಿ ನಾಗವೇಣಿ ಪ್ರಥಮ ಮತ್ತು ತ್ರಿವಿಧ ಜಿಗಿತದಲ್ಲಿ ಜಿಲ್ಲೆಗೆ ದ್ವಿತೀಯ ಸ್ಥಾನ ಲಭಿಸಿದೆ. ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಸಾಧನೆಯನ್ನು ಕಾರ್ಯದರ್ಶಿ ವಿಟ್ಟಾ ಲಕ್ಷ್ಮಿನಾರಾಯಣ ಶೆಟ್ಟಿ, ಮುಖ್ಯಗುರು ಪಿ.ರಾಧಾ ಸಿಬ್ಬಂದಿ ಅಭಿನಂದಿಸಿದ್ದಾರೆ.