ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಶರನ್ನವರಾತ್ರಿ ನಿಮಿತ್ತ ಲಕ್ಷ ಪುಷ್ಪಾರ್ಚನೆ

Mainashree
Updated On : 15 Oct 2013, 12:05 pm

ಕನ್ನಡಪ್ರಭ ವಾರ್ತೆ, ಹೂವಿನಹಡಗಲಿ, ಅ. 14
ಶರನ್ನವರಾತ್ರಿ ಪ್ರಯುಕ್ತ ಪಟ್ಟಣದ ಸಿಂಗಟಾಲೂರು ಏತನೀರಾವರಿ ಯೋಜನೆ ಕಾಲೋನಿಯ ಮಹಾಗಣಪತಿ ದೇವಸ್ಥಾನದಲ್ಲಿ ಶ್ರೀಯಂತ್ರಕ್ಕೆ ಲಕ್ಷ ಪುಷ್ಪಾರ್ಚನೆ ನೆರವೇರಿತು.
ಕಾರ್ಯಕ್ರಮದಲ್ಲಿ 101 ಸುಮಂಗಲೆಯರು ಶಿವಮೊಗ್ಗದ ದೇವಿ ಉಪಾಸಕ ಮನೋಹರ ಭಟ್ಟರ ಮಾರ್ಗದರ್ಶನದಲ್ಲಿ ಲಕ್ಷ ಪುಷ್ಪಾರ್ಚನೆ ಮಾಡಿದರು. ಗವಿಮಠದ ಹಿರಿಶಾಂತವೀರ ಸ್ವಾಮೀಜಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿ, ಮಹಿಳೆಯರು ಇಂತಹ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದಾಗ ಮಕ್ಕಳು ಸಂಸ್ಕಾರವಂತರಾಗಿ ಬೆಳೆಯುತ್ತಾರೆ. ಅನ್ನದಾತರ ಖುಷ್ಕಿ ಜಮೀನುಗಳಿಗೆ ನೀರು ಹರಿಸುವ ನೀರಾವರಿ ಇಲಾಖೆ ಅಧಿಕಾರಿಗಳು ಸಾಂದರ್ಭಿಕವಾಗಿ ಇಂತಹ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಧಾರ್ಮಿಕ ಸುಧೆಯನ್ನು ಪಟ್ಟಣದ ಜನತೆಗೆ ಒದಗಿಸಿರುವುದು ಸ್ತುತ್ಯಾರ್ಹ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಾಗಣಪತಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಓದೋಗಂಗಪ್ಪ ಮಾತನಾಡಿ, ದಾನಿಗಳ ಉದಾರ ದೇಣಿಗೆಯಿಂದ ನಿರ್ಮಿಸಿರುವ ದೇವಸ್ಥಾನದಲ್ಲಿ ಪವಾಡವೆಂಬಂತೆ ಅನೇಕ ಧಾರ್ಮಿಕ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಒಂದೊಂದು ಸ್ಥಳದ ಶಕ್ತಿ ಮಹಿಮೆಯಿಂದ ಎಲ್ಲ ಕಾರ್ಯಗಳಿಗೆ ಯಾವುದೇ ವಿಘ್ನ ಬಾರದಂತೆ ನಡೆಸಿಕೊಂಡು ಬಂದಿದೆ ಎಂದರು.
ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಡಾ. ಯೋಗಾನಂದ ಪ್ರಾಸ್ತಾವಿಕ ಮಾತನಾಡಿದರು. ಶೃಂಗೇರಿ ದೇವಸ್ಥಾನದ ಧರ್ಮಾಧಿಕಾರಿ ಭೀಮಸೇನರಾವ್ ಅಳವಂಡಿಕರ್, ದೇವಸ್ಥಾನ ಅರ್ಚಕ ಶಶಿಕಾಂತ ಭಟ್ ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement