ಇಂದು ಕಾರ್ಯಾಗಾರ
ಬಳ್ಳಾರಿ: ನಗರದ ಗುರುತಿಪ್ಪೇರುದ್ರ ಮಹಾವಿದ್ಯಾಲಯದಲ್ಲಿ ಅ. 17ರಂದು ಸಂಜೆ 5ಕ್ಕೆ ಜೀವನ ವಿಕಾಸ ಕೌಶಲ ಕಾರ್ಯಗಾರವನ್ನು ಏರ್ಪಡಿಸಲಾಗಿದೆ. ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿವಿ ಕುಲಪತಿ ಡಾ. ಮಂಜಪ್ಪ ಡಿ. ಹೊಸಮನೆ ಕಾರ್ಯಕ್ರಮ ಉದ್ಘಾಟಿಸುವರು. ತಿಪ್ಪೇರುದ್ರ ಶಿಕ್ಷಣ ಸಂಸ್ಥೆ ಅಧ್ಯಕ್ಷ ಎಸ್.ಎನ್. ರುದ್ರಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಡಾ. ಬೆಣ್ಣೆ ಬಸವರಾಜ್, ರಂಗನಾಥರಾವ್, ಜಿ. ನಾಗರಾಜ್, ಕೆ. ರಾಮಕಿರಣ್, ಅನಿಲ್ಕುಮಾರ್, ಎಚ್.ಆರ್. ಬಾಲನಾಗರಾಜ್, ಎಸ್.ಬಿ. ಮಲ್ಲಿಕಾರ್ಜುನ್, ಮಹಾನಂದ ಸಿ. ಕಾಮೋಜಿ, ಪ್ರಸನ್ನಕುಮಾರ್ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಇಸ್ಪೀಟ್ ಜೂಜಾಟ: 8 ಜನರ ಬಂಧನ
ಬಳ್ಳಾರಿ: ನಗರದ ಬಳ್ಳಾರಪ್ಪ ಕಾಲೋನಿಯಲ್ಲಿ ಇಸ್ಪೀಟ್ ಜೂಜಾಟದ ಅಡ್ಡೆ ಮೇಲೆ ದಾಳಿ ಮಾಡಿದ ಪೊಲೀಸರು, 8 ಜನರನ್ನು ಬಂಧಿಸಿ, ಅವರಿಂದ ರು. 5,075 ವಶಪಡಿಸಿಕೊಂಡಿದ್ದಾರೆ. ಜೂಜಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಅರಿತ ಎಪಿಎಂಸಿ ಠಾಣೆ ಪಿಎಸ್ಐ ನಿರಂಜನ್ಕುಮಾರ್ ಹಾಗೂ ಸಿಬ್ಬಂದಿ ದಾಳಿ ಮಾಡಿ, ಹನುಮಂತ, ಶ್ರೀನಿವಾಸ, ಕೆ.ಎಂ. ರಾಮು, ಮಾರುತಿ, ಅಗಸರ ಹನುಮಂತ, ವೀರೇಶ್, ಜಿ. ನಾಗರಾಜ್, ಬಿ. ಹೊನ್ನೂರಪ್ಪ ಅವರನ್ನು ಬಂಧಿಸಿದ್ದಾರೆ. ಈ ಕುರಿತು ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಸ್ಪೀಟ್: ಬಂಧನ, ನಗದು ವಶ
ಬಳ್ಳಾರಿ: ಹಗರಿಬೊಮ್ಮನಹಳ್ಳಿ ತಾಲೂಕಿನ ಮುಟುಗನಹಳ್ಳಿ ಗ್ರಾಮದಲ್ಲಿ ಇಸ್ಪೀಟ್ ಜೂಜಾಟದ ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿ, ಆರೋಪಿಗಳನ್ನು ಬಂಧಿಸಿ, ಅವರಿಂದ ರು. 4,080 ವಶಪಡಿಸಿಕೊಂಡಿದ್ದಾರೆ. ಇಸ್ಪೀಟ್ ಜೂಜಾಟ ಆಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಹಗರಿಬೊಮ್ಮನಹಳ್ಳಿ ಠಾಣಾ ಪೊಲೀಸರು ದಾಳಿ ಮಾಡಿದ್ದಾರೆ. ಈ ಕುರಿತು ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.