21ರಂದು 'ತಲೆದಂಡ' ಪುಸ್ತಕ ಬಿಡುಗಡೆ
ಕನ್ನಡಪ್ರಭ ವಾರ್ತೆ, ಬಳ್ಳಾರಿ, ಅ. 18
ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಅ. 21ರಂದು ಸಂಜೆ 5.30ಕ್ಕೆ ಜ್ಞಾನಪೀಠ ಪ್ರಶಸ್ತಿ ವಿಜೇತ ಗಿರೀಶ್ ಕಾರ್ನಾಡ್ರ 'ತಲೆದಂಡ' ಪುಸ್ತಕ ಬಿಡುಗಡೆ ಸಮಾರಂಭ ಜರುಗಲಿದೆ.
ಶ್ರೀರಾಮಾಂಜನೇಯ ತೊಗಲು ಗೊಂಬೆ ಮೇಳ ಟ್ರಸ್ಟ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಸ್ಥಳೀಯ ಹಿರಿಯ ಸಾಹಿತಿ ವೈ. ರಾಘವೇಂದ್ರರಾವ್ ಕಾರ್ಯಕ್ರಮ ಉದ್ಘಾಟಿಸುವರು. ಕಲಾವಿದ ಪಿ. ಸುರೇಶ್ ಶೆಟ್ಟಿ ಅಧ್ಯಕ್ಷತೆ ವಹಿಸುವರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಮುಖ್ಯ ಅತಿಥಿಗಳಾಗಿ ಆಗಮಿಸುವರು. ನಂತರ ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಡಾ. ವಸುಂಧರಾ ಭೂಪತಿ, ಮಾಜಿ ಶಾಸಕ ಬೆಂಗಳೂರು, ಎಚ್.ಬಿ. ಯಶೋಧಾ ಬಿ.ಎಂ. ರಾಮಚಂದ್ರರಾವ್, ರಾಜೇಶ್ವರಿ ವಸ್ತ್ರಾಲಂಕಾರ ಇವರನ್ನು ರಂಗ ಗೌರವ ನೀಡಿ ಸನ್ಮಾನಿಸಲಾಗುವುದು ಎಂದು ಟ್ರಸ್ಟ್ನ ಮಲ್ಲಿಕಾರ್ಜುನ ಬೆಳಗಲ್ ತಿಳಿಸಿದ್ದಾರೆ.