ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಗೋಷ್ ಆಸ್ಪತ್ರೆಯಲ್ಲಿ ವಾಲ್ಮೀಕಿ ಜಯಂತಿ

Mainashree
Updated On : 20 Oct 2013, 1:02 am

ಬಳ್ಳಾರಿ: ನಗರದ ಜಿಲ್ಲಾ ಗೋಷ್ ಆಸ್ಪತ್ರೆ ಆವರಣದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಶುಕ್ರವಾರ ಆಚರಿಸಲಾಯಿತು.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ಸ್ವಾಯತ್ತ ಸಂಸ್ಥೆ, ಪ. ಜಾತಿ, ಪ. ಪಂಗಡಗಳ ನೌಕರರ ಸಂಘ ಜಿಲ್ಲಾ ಶಾಖೆ ಇವರ ಸಹಯೋಗದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಂಘದ ಗೌರವಾಧ್ಯಕ್ಷ ಗಾಜಣ್ಣ ವಾಲ್ಮೀಕಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಪೂಜೆ ಸಲ್ಲಿಸಿದರು.
ಸಂಘದ ಸಂಘಟನಾ ಕಾರ್ಯದರ್ಶಿ ಕೆ. ಮಲ್ಲಪ್ಪ ಮಾತನಾಡಿದರು. ಸಂಘದ ಪದಾಧಿಕಾರಿಗಳಾದ ರವಿಷಂದ್ರ, ರತ್ನಮ್ಮ, ಗೋವಿಂದಪ್ಪ, ಪಾಂಡು, ವೆಂಕಟೇಶ್, ಅಂಬಣ್ಣ, ರೇಣುಕಾ, ಶಿವಪ್ಪ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಸಂಘಟನಾ ಕಾರ್ಯದರ್ಶಿ ವಿರೂಪಾಕ್ಷ, ಗೋಷ್ ಆಸ್ಪತ್ರೆ ಸಿಬ್ಬಂದಿ ಇದ್ದರು.
ವಿಎಚ್‌ಯಿಂದ ಆಚರಣೆ
ವಿಶ್ವಹಿಂದೂ ಪರಿಷದ್ ಜಿಲ್ಲಾ ಘಟಕದ ವತಿಯಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ನಗರದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ವಿಎಚ್‌ಪಿ ಜಿಲ್ಲಾ ಕಾರ್ಯದರ್ಶಿ ಬಿ. ಬಸವರಾಜ್ ಮಾತನಾಡಿದರು.
ಈ ಸಂದರ್ಭದಲ್ಲಿ ಪರಿಷದ್‌ನ ಬದ್ರಿನಾಥ್, ವೀರೇಶ್, ಮಲ್ಲಿಕಾರ್ಜುನ, ಪರಶುರಾಂ, ವಿಜಯ್, ಶಂಕರಗೌಡ, ಸುನೀತಾ, ಶ್ವೇತಾ, ಬಜರಂಗದಳದ ಸಹ ಸಂಚಾಲಕ ಸುಧಾಕರ, ವಿನೋದ, ಭಾರತ ಸ್ವಾಭಿಮಾನ್ ಟ್ರಸ್ಟ್‌ನ ಜಿಲ್ಲಾಧ್ಯಕ್ಷ ಕಣೇಕಲ್ ಎರ್ರಿಸ್ವಾಮಿ ಸೇರಿದಂತೆ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement