ತರಬೇತಿಗೆ ಅರ್ಜಿ ಆಹ್ವಾನ
ಬಳ್ಳಾರಿ: ಬಳ್ಳಾರಿಯ ಸಿಂಡ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯು ನಗರ ಹಾಗೂ ಗ್ರಾಮೀಣ ಪ್ರದೇಶದ ನಿರುದ್ಯೋಗಿ ಯುವಕ-ಯುವತಿಯರಿಗಾಗಿ ಉಚಿತ ಕಂಪ್ಯೂಟರ್ ಡಾಟಾ ಎಂಟ್ರಿ ತರಬೇತಿಗೆ ಅರ್ಜಿ ಆಹ್ವಾನಿಸಿದೆ.
18ರಿಂದ 45 ವಯೋವುತಿಯೊಳಗಿನ ನಿರುದ್ಯೋಗಿ ಯುವಕ-ಯುವತಿಯರು ತರಬೇತಿಗೆ ಅರ್ಜಿ ಸಲ್ಲಿಸಬಹುದು. ತರಬೇತಿಯ ಅವಧಿ 30 ದಿನಗಳಾಗಿದ್ದು, ಉಚಿತ ಊಟ, ವಸತಿ ಹಾಗೂ ಕೌಶಲ್ಯದ ಜತೆಗೆ ಉದ್ಯಮಶೀಲತೆ, ವ್ಯಕ್ತಿತ್ವ ವಿಕಸನಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಲಾಗುತ್ತದೆ. ನವೆಂಬರ್ 8ರಿಂದ ತರಬೇತಿ ಪ್ರಾರಂಭವಾಗಲಿದ್ದು, ಕನ್ನಡವನ್ನು ಓದಲು ಹಾಗೂ ಬರೆಯಲು ಬರುವ ನಿರುದ್ಯೋಗಿ, ಸ್ವ ಉದ್ಯೋಗ ಆಕಾಂಕ್ಷಿಗಳು ತರಬೇತಿಯಲ್ಲಿ ಭಾಗವಹಿಸಲು ಅರ್ಹರು. ಸಂಸ್ಥೆಯಲ್ಲಿ ಈ ಮೊದಲು ತರಬೇತಿ ಪಡೆದವರು ಪುನಃ ತರಬೇತಿ ಪಡೆಯಲು ಅರ್ಹರಲ್ಲ.
ಆಸಕ್ತರು ತಮ್ಮ ಹೆಸರು, ವಿಳಾಸ, ಸಂಪರ್ಕಕ್ಕೆ ಲಭ್ಯವಿರುವ ದೂರವಾಣಿ ಸಂಖ್ಯೆ, ವಯಸ್ಸು, ವಿದ್ಯಾರ್ಹತೆ ಹಾಗೂ ಇತರೆ ಮಾಹಿತಿಯೊಂದಿಗೆ ಬಿಳಿ ಹಾಳೆಯಲ್ಲಿ ಬರೆದ ಅರ್ಜಿಯನ್ನು ನಿರ್ದೇಶಕರು, ಸಿಂಡ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ, ಡಿಐಸಿ ಕಾಂಪೌಂಡ್, ಹೊಸಪೇಟೆ ರಸ್ತೆ, ಬಳ್ಳಾರಿ. ಈ ವಿಳಾಸಕ್ಕೆ ಆ. 31ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ದೂ.ಸಂ-08392-244117ಗೆ ಸಂಪರ್ಕಿಸುವಂತೆ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.